ಬೆಂಗಳೂರು :
ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು ಬಿಜೆಪಿ ಅಭ್ಯರ್ಥಿ ಚಿದಾನಂದಗೌಡ ಗೆಲುವಿನ ನಗೆ ಬೀರಿದ್ದಾರೆ.
ಚಿತ್ರದುರ್ಗ, ದಾವಣಗೆರೆ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳನ್ನೊಳಗೊಂಡ ಆಗ್ನೇಯ ಪದವೀಧರ ಕ್ಷೇತ್ರಕ್ಕೆ ಅ.28ರಂದು ಮತದಾನ ನಡೆದಿತ್ತು. ನವೆಂಬರ್ 2ರಂದೇ ನಡೆಯಬೇಕಿದ್ದ ಮತ ಎಣಿಕೆಯನ್ನು ನವೆಂಬರ್ 10ಕ್ಕೆ ಚುನಾವಣಾ ಆಯೋಗ ಮುಂದೂಡಿತ್ತು.
ಮತಏಣಿಕೆ ಕಾರ್ಯ ನಿನ್ನೆ ಶುರುವಾಗಿದ್ದು, ಇಂದೂ ಕೂಡ ಮುಂದುವರೆದಿದ್ದು, ಇಂತಹ ಆಗ್ನೇಯ ಪದವೀಧರ ಕ್ಷೇತ್ರದ ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿಯ ಅಭ್ಯರ್ಥಿ ಚಿದಾನಂದ ಗೌಡ ಭರ್ಜರಿ ಗೆಲುವನ್ನು ಸಾಧಿಸಿದ್ದಾರೆ.
ಒಟ್ಟು 14 ಟೇಬಲ್ ಗಳಲ್ಲಿ ನಡೆದ ಮತ ಎಣಿಕೆಯಲ್ಲಿ ಚಿದಾನಂದ ಗೌಡ 24,217 ಮತಗಳನ್ನು ಪಡೆಯುವ ಮೂಲಕ ತಮ್ಮ ಪ್ರತಿಸ್ಪರ್ಧಿ ಪಕ್ಷೇತರ ಅಭ್ಯರ್ಥಿ ಡಿ.ಟಿ. ಶ್ರೀನಿವಾಸ್ ಅವರನ್ನು ಸೋಲಿಸಿದ್ದಾರೆ.
ಬಿಜೆಪಿಗೆ ಚುನಾವಣೆ ಆರಂಭದಿಂದಲೂ ಬಂಡಾಯದ ಬಿಸಿ ತಾಗಿತ್ತಾದರೂ ಅಂತಿಮವಾಗಿ ಮತದಾರ ಬಿಜೆಪಿಯ ಅಧಿಕೃತ ಅಭ್ಯರ್ಥಿ ಚಿದಾನಂದ ಗೌಡ ಮೇಲೆ ಕೃಪೆ ತೋರಿದ್ದಾನೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ