ಕೆಎಎಸ್‌ ಅಧಿಕಾರಿ ಅಪೂರ್ವ ಬಿದರಿ ವಿರುದ್ಧ ಎಫ್‌ಐಆರ್‌…..!

ಬೆಂಗಳೂರು: 

    53 ಅರೆ ನ್ಯಾಯಿಕ ಪ್ರಕರಣಗಳಲ್ಲಿ ದೋಷಪೂರಿತ ಆದೇಶ ಹೊರಡಿಸಿದ ಹಿನ್ನೆಲೆಯಲ್ಲಿ ಬೆಂಗಳೂರು ದಕ್ಷಿಣ ಉಪವಿಭಾಗದ ಉಪವಿಭಾಗಾಧಿಕಾರಿ ಅಪೂರ್ವ ಬಿದರಿ  ವಿರುದ್ಧ ಭಾರತೀಯ ನ್ಯಾಯ ಸಂಹಿತೆ 257 ರಡಿಯಲ್ಲಿ ಶಿಸ್ತು ಕ್ರಮ ಜರುಗಿಸಲು ಜಿಲ್ಲಾಧಿಕಾರಿಗೆ ಕಂದಾಯ ಇಲಾಖೆಯ ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರು ಸೂಚನೆ ನೀಡಿದ್ದಾರೆ. ಅಪೂರ್ವ ಬಿದರಿ ವಿರುದ್ಧ ಎಫ್‌ಐಆರ್‌ ದಾಖಲಿಸಿ, FIR ಪ್ರತಿಯೊಂದಿಗೆ ಅನುಪಾಲನಾ ವರದಿಯನ್ನು ತುರ್ತಾಗಿ ಸಲ್ಲಿಸಲು ಸೂಚಿಸಲಾಗಿದೆ.

    ಬೆಂಗಳೂರು ದಕ್ಷಿಣ ಉಪವಿಭಾಗದ ಎಸಿ ಅಪೂರ್ವ ಬಿದರಿ ಅವರು ಅರೆ ನ್ಯಾಯಿಕ ಪ್ರಕರಣಗಳಲ್ಲಿ ದೋಷಪೂರಿತವಾಗಿ ಆದೇಶಗಳನ್ನು ಹೊರಡಿಸಿ ಮೇಲ್ಮನವಿ ಪ್ರಕರಣಗಳನ್ನು ವಿಲೇವಾರಿ ಮಾಡಿರುವ ವಿಧಾನಗಳನ್ನು ಪರಿಶೀಲಿಸುವ ಸಂಬಂಧ ತಂಡ ರಚಿಸಿ, ಈ ಅಧಿಕಾರಿ ಅಧಿಕಾರ ವಹಿಸಿಕೊಂಡ ದಿನಾಂಕದಿಂದ ಇಲ್ಲಿಯವರೆಗೂ ಹೊರಡಿಸಿರುವ ಆದೇಶಗಳಿಗೆ ಸಂಬಂಧಿಸಿದ ಕಡತಗಳನ್ನು ಪಡೆದು ಪರಿಶೀಲಿಸಿದಾಗ 53 ಅರೆ ನ್ಯಾಯಿಕ ಪ್ರಕರಣಗಳನ್ನು ನಿರ್ಧರಿಸುವಲ್ಲಿ ನ್ಯೂನ್ಯತೆಗಳು ಉಂಟಾಗಿರುವುದು ಕಂಡುಬಂದಿದೆ.

    ಹೀಗಾಗಿ ಅಪೂರ್ವ ಬಿದರಿ ವಿರುದ್ಧ ಕರ್ನಾಟಕ ಭೂಕಂದಾಯ ಅಧಿನಿಯಮ, 1964 ರ ಸೆಕ್ಷನ್ 35 ರಡಿಯಲ್ಲಿ ಹಾಗೂ ಭಾರತೀಯ ನ್ಯಾಯಸಂಹಿತೆ 257 ರಡಿಯಲ್ಲಿ ಶಿಸ್ತು ಕ್ರಮ ಜರುಗಿಸಬಹುದೆಂದು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಮುಂದುವರಿದು, ಈ ಪ್ರಸ್ತಾವನೆಯನ್ನು ಸರ್ಕಾರದ ಹಂತದಲ್ಲಿ ಪರಿಶೀಲಿಸಿ, ಅಪೂರ್ವ ಬಿದರಿ ವಿರುದ್ಧ ಎಫ್‌ಐಆರ್‌ ದಾಖಲಿಸಿ, ಕ್ರಮ ಕೈಗೊಳ್ಳಲು ನಿರ್ದೇಶಿಸಲಾಗಿರುತ್ತದೆ.

    ಹೀಗಾಗಿ ಎಸಿ ಅಪೂರ್ವ ಬಿದರಿ ವಿರುದ್ಧ ಕರ್ನಾಟಕ ಭೂಕಂದಾಯ ಅಧಿನಿಯಮ 1964 ರ ಸೆಕ್ಷನ್ 35 ರಡಿ ಹಾಗೂ ಭಾರತೀಯ ನ್ಯಾಯ ಸಂಹಿತೆ 2023 ರ ಸೆಕ್ಷನ್ 257ರ ಅಡಿಯಲ್ಲಿ FIR ದಾಖಲಿಸಿ, ಸದರಿ FIR ಪ್ರತಿಯೊಂದಿಗೆ ಅನುಪಾಲನಾ ವರದಿಯನ್ನು ತುರ್ತಾಗಿ ಸಲ್ಲಿಸಬೇಕು ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿಗೆ ಪತ್ರದ ಮೂಲಕ ಪ್ರಾದೇಶಿಕ ಆಯುಕ್ತರು ಸೂಚಿಸಿದ್ದಾರೆ.

Recent Articles

spot_img

Related Stories

Share via
Copy link