ಬೆಂಗಳೂರು : KAS ಅಧಿಕಾರಿ ಪತ್ನಿ ಆತ್ಮಹತ್ಯೆ ….!

ಬೆಂಗಳೂರು:

    ಕೆಎಎಸ್ ಅಧಿಕಾರಿ ಪತ್ನಿಯೂ ಆಗಿರುವ ಹೈಕೋರ್ಟ್‌ ವಕೀಲರಾದ ಚೈತ್ರಾಗೌಡ ಅವರು ಶನಿವಾರ ಆತ್ಮಹತ್ಯೆ ಮಾಡಿಕೊಂಡಿದ್ದು, ನೇಣು ಬಿಗಿದ ಸ್ಥಿತಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ.

    ಕೆಎಎಸ್ ಅಧಿಕಾರಿ ಶಿವಕುಮಾರ್ ಅವರ ಪತ್ನಿ ಚೈತ್ರಾಗೌಡ ಅವರು ಇಂದು ಸಂಜಯ್ ​ನಗರದಲ್ಲಿರುವ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಫ್ಯಾನ್​​ಗೆ ನೇಣುಬಿಗಿದ ಸ್ಥಿತಿಯಲ್ಲಿ ಅವರ ಶವಪತ್ತೆ ಆಗಿದೆ

    ಮನೆಯಲ್ಲಿ ಯಾವುದೇ ಡೆತ್​​ನೋಟ್ ಪತ್ತೆಯಾಗಿಲ್ಲ. ಹೀಗಾಗಿ ಸಾವಿಗೆ ಕಾರಣ ಏನು ಎಂಬುದು ಇನ್ನೂ ತಿಳಿದುಬಂದಿಲ್ಲ. ಸದ್ಯ ಘಟನಾ ಸ್ಥಳಕ್ಕೆ ಸಂಜಯ್ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಈ ಸಂಬಂಧ ಮೃತ ಚೈತ್ರಾ ಗೌಡ ಅವರ ಸಹೋದರ ಕೊಟ್ಟ ದೂರಿನ ಆಧಾರದ ಮೇಲೆ ಸಂಜಯ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap