ಬಿಜೆಪಿ ರಾಜ್ಯಧ್ಯಕ್ಷ ಸ್ಥಾನಕ್ಕೆ ಕಟೀಲ್‌ ರಾಜೀನಾಮೆ

ಬಳ್ಳಾರಿ:

     ವಿಧಾನಸಭೆ ಚುನಾವಣೆ ಸೋಲಿನ ಬೆನ್ನಲ್ಲೇ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಿದ್ದೇನೆ ಎಂದು ಬಿಜೆಪಿ ನಾಯಕ ನಳೀನ್ ಕುಮಾರ್ ಕಟೀಲ್ ಹೇಳಿದ್ದಾರೆ.

    ಬಳ್ಳಾರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಳೀನ್ ಕುಮಾರ್ ಕಟೀಲ್, ವಿಧಾನಸಭಾ ಚುನಾವಣೆ ಸೋಲಿನ ಬೆನ್ನಲ್ಲೇ ರಾಜೀನಾಮೆ ನೀಡಿದ್ದೇನೆ. ಬಿಜೆಪಿ ಸೋಲಿನ ಹಿನ್ನೆಲೆಯಲ್ಲಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ.
    ಚುನಾವಣೆಯ ಸೋಲಿನ ಬಳಿಕ ನೈತಿಕ ಹೊಣೆ ಹೊತ್ತು ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ಲಿಖಿತ ಹಾಗೂ ಮೌಖಿಕವಾಗಿ ರಾಜೀನಾಮೆ ನೀಡಲಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷರಾಗಿ ನನ್ನ ಎರಡು ವರ್ಷದ ಅವಧಿ ಮುಗಿದಿದೆ. ಅದರ ಬೆನ್ನಲ್ಲಿಯೇ ನಾನು ರಾಜೀನಾಮೆಯನ್ನೂ ನೀಡಿದ್ದೇನೆ. ಈಗಾಗಲೇ ರಾಜೀನಾಮೆ ಪತ್ರವನ್ನು ಲಿಖಿತವಾಗಿಯೂ ಕಳಿಸಿದ್ದೇನೆ ಎಂದು ಅವರು ಸ್ಪಷ್ಟನೆ ನೀಡಿದ್ದಾರೆ. 

 

    ಇದೇ ವೇಳೆ ಅಕ್ಕಿ ನಿರಾಕರಣೆ ಕುರಿತು ಮಾತನಾಡಿದ ಕಟೀಲ್, ‘ಕೇಂದ್ರದಲ್ಲಿ ಕಳೆದ ಒಂಭತ್ತು ವರ್ಷ ಭ್ರಷ್ಟಾಚಾರ ರಹಿತ ಸರ್ಕಾರ ನೀಡಿದ್ದೇವೆ. ಭಯೋತ್ಪಾದನಾ ಚಟುವಟಿಕೆ ಶೇ 80 ಕಡಿಮೆ ಆಗಿದೆ, ನಕ್ಸಲ್ ಹಾಗೂ ಆತಂಕವಾದ ನಿರ್ಮೂಲನೆ ಮಾಡಿದ್ದು, ಕೇಂದ್ರ ಸರ್ಕಾರದ ನಿರಂತರವಾಗಿ 5 ಕೆಜಿ ಅಕ್ಕಿ ಕೊಡುತ್ತದೆ. ದೇಶದ ಎಲ್ಲಾ ರಾಜ್ಯಗಳಿಗೆ ಅಕ್ಕಿ ಕೊಡುತ್ತದೆ. ಬರ ಮತ್ತು ನೆರೆ ಬಂದಾಗ ವಿತರಿಸಲು ಕೇಂದ್ರ ಅಕ್ಕಿ ಸಂಗ್ರಹ ಮಾಡುತ್ತದೆ ಎಂದು ಹೇಳಿದರು.

    ಇನ್ನೂ ರಾಜ್ಯದಲ್ಲಿ ಅನಿರೀಕ್ಷಿತ ಫಲಿತಾಂಶ ಬಂದಿದೆ. ಕಾಂಗ್ರೆಸ್ ನ ಗ್ಯಾರೆಂಟಿ ಕಾರ್ಡ್ ಗಳಿಂದ ಸರ್ಕಾರ ಬಂದಿದೆ. ಇನ್ನೂ ರಾಜ್ಯದಲ್ಲಿ ಒಳ ಒಪ್ಪಂದದ ಬಗ್ಗೆ ಬಿಜೆಪಿ ನಾಯಕರ ಹೇಳಿಕೆಯನ್ನ ಗಮನಿಸಿದ್ದೇನೆ. ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಒಳ ಒಪ್ಪಂದ ಮಾಡಿಕೊಂಡಿಲ್ಲ. ರಾಜ್ಯದಲ್ಲಿ ಬಿಜೆಪಿಯಿಂದ ಲಿಂಗಾಯಿತರ ಹಾಗೂ ಮಾಜಿ ಸಿಎಂ ಯಡಿಯೂರಪ್ಪ ಅವರನ್ನ ಕಡಗಣನೆ ಮಾಡಿಲ್ಲ.

    ಕರ್ನಾಟಕದಲ್ಲಿ ಬಿಜೆಪಿ ಲಿಂಗಾಯತ ಮುಖ್ಯಮಂತ್ರಿ ಮಾಡಿದ್ದು, ಯಡಿಯೂರಪ್ಪ ಹಾಗೂ ಬೊಮ್ಮಾಯಿ ಅವರನ್ನ ಬಿಜೆಪಿ ಸಿಎಂ ಮಾಡಿದೆ. ರಾಜ್ಯದಲ್ಲಿ ಲಿಂಗಾಯತರು ಮತ್ತೆ ಸಿಎಂ ಆಗಬೇಕಾದ್ರೆ ಬಿಜೆಪಿ ಅಧಿಕಾರಕ್ಕೆ ಬರಬೇಕು. ನನ್ನ ಅವಧಿ ಮುಕ್ತಾಯವಾಗಿದೆ, ಹೊಸದಾಗಿ ಪಕ್ಷದ ರಾಜ್ಯಾಧ್ಯಕ್ಷರಾಗಿ ಆಯ್ಕೆ ನಡೆಯುತ್ತದೆ. ನೈತಿಕವಾಗಿ ನಾನು ಜವಾಬ್ದಾರಿ ಹೊತ್ತಿದ್ದೇನೆ. ರಾಷ್ಟ್ರೀಯ ಅಧ್ಯಕ್ಷರಿಗೆ ಜವಾಬ್ದಾರಿ ಹೊತ್ತು ರಾಜೀನಾಮೆ ಪತ್ರ ನೀಡಿದ್ದೇನೆ. ಮೌಖಿಕವಾಗಿಯೂ ರಾಷ್ಟ್ರೀಯ ಅಧ್ಯಕ್ಷ ರಿಗೆ ತಿಳಿಸಿದ್ದೇನೆ ಎಂದು ತಿಳಿಸಿದ್ದಾರೆ.

     ಇನ್ನೂ ರಾಜ್ಯಾಧ್ಯಕ್ಷ ಸ್ಥಾನಕ್ಕೆ ವಿ ಸೋಮಣ್ಣ ಬೇಡಿಕೆ ಇಟ್ಟ ವಿಚಾರವಾಗಿ ಮಾತನಾಡಿ, ಸೋಮಣ್ಣ ಹಿರಿಯ ನಾಯಕರು, ಪಕ್ಷದ ರಾಜ್ಯಾಧ್ಯಕ್ಷ ಕೇಳುವುದು ತಪ್ಪಲ್ಲ. ರಾಜ್ಯಾಧ್ಯಕ್ಷ ಸ್ಥಾನದ ಕುರಿತು ರಾಷ್ಟ್ರಾಧ್ಯಕ್ಷರು ನಿರ್ಧರಿಸುತ್ತಾರೆ ಎಂದು ಹೇಳಿದ ಅವರು, ಗೋ ಹತ್ಯೆ ನಿಷೇಧ ಹಾಗೂ ಮತಾಂತರ ನಿಷೇಧ ಕಾಯ್ದೆ ನಮ್ಮ ಸರ್ಕಾರ ತಂದಿದೆ. ಕಾಂಗ್ರೆಸ್ ಸರ್ಕಾರ ವಾಪಾಸ್ ಪಡೆಯಲು ಮುಂದಾಗಿದೆ, ಇದೊಂದು ದ್ವೇಷದ ರಾಜಕಾರಣ ಮಾಡುವುದು ಸರಿಯಲ್ಲ. ಈ ಕಾಯ್ದೆ ವಾಪಾಸ್ ಪಡೆದರೇ ಹೋರಾಟ ಮಾಡುತ್ತೇವೆ ಎಂದು ರಾಜ್ಯ ಸರ್ಕಾರಕ್ಕೆ ಎಚ್ಚರಿಕ್ಕೆ ನೀಡಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap