ನವದೆಹಲಿ :ಕವಿತಾ ಆರೋಗ್ಯದಲ್ಲಿ ಏರುಪೇರು : ಆಸ್ಪತ್ರೆಗೆ ದಾಖಲು

ನವದೆಹಲಿ:

    ರದ್ದಾಗಿರುವ ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ದೆಹಲಿಯ ತಿಹಾರ್ ಜೈಲಿನಲ್ಲಿರುವ ಭಾರತ್ ರಾಷ್ಟ್ರ ಸಮಿತಿ ನಾಯಕಿ ಕೆ ಕವಿತಾ ಅವರನ್ನು ಮಂಗಳವಾರ ದೀನ್ ದಯಾಳ್ ಉಪಾಧ್ಯಾಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

   “ಕೆಲವು ಆರೋಗ್ಯ ಸಮಸ್ಯೆಗಳಿಂದಾಗಿ ಕೆ ಕವಿತಾ ಅವರನ್ನು ಡಿಡಿಯು ಆಸ್ಪತ್ರೆಗೆ ಕರೆದೊಯ್ಯಲಾಗಿದೆ” ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ 46 ವರ್ಷದ ಬಿಆರ್‌ಎಸ್ ನಾಯಕಿ ಕೆ ಕವಿತಾ ಅವರನ್ನು ಮಾರ್ಚ್ 15ರಂದು ಹೈದರಾಬಾದ್‌ನ ಬಂಜಾರಾ ಹಿಲ್ಸ್ ನಿವಾಸದಲ್ಲಿ ಇಡಿ ಅಧಿಕಾರಿಗಳು ಬಂಧಿಸಿದ್ದರು.

Recent Articles

spot_img

Related Stories

Share via
Copy link
Powered by Social Snap