ಕೆಮಿಕಲ್​ ಫ್ಯಾಕ್ಟರಿಯಲ್ಲಿ ಭಾರಿ ಸ್ಫೋಟ : ಇಬ್ಬರ ಬಲಿ!!

ರಾಯ​ಗಡ​​ : 

      ರಾಸಾಯನಿಕ ಉತ್ಪಾದನಾ ಕೈಗಾರಿಕಾ ಘಟಕದಲ್ಲಿ ಸ್ಫೋಟ ಸಂಭವಿಸಿ, ಇಬ್ಬರು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ರಾಯಗಢದ ಡೇಕು ಪ್ರದೇಶದಲ್ಲಿ ನಡೆದಿದೆ.

      ಮುಂಜಾನೆ 3 ಗಂಟೆಗೆ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಓರ್ವ ಮಹಿಳೆ ಸೇರಿದಂತೆ ಇಬ್ಬರು ಮೃತಪಟ್ಟಿದ್ದಾರೆ. 

     ವಿಷಯ ತಿಳಿದ ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿ 10 ವಾಹನಗಳೊಂದಿಗೆ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಲು ಮುಂದಾದವು.

      ಸ್ಫೋಟದಲ್ಲಿ 6 ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ದುಧೆ ಸ್ಥಳಕ್ಕೆ ತೆರಳಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link
Powered by Social Snap