ತೆಲಂಗಾಣ : ಮಾಜಿ ಸಿಎಂ ಆಸ್ಪತ್ರೆಗೆ ದಾಖಲು ….!

ಹೈದರಾಬಾದ್:

    ತೆಲಂಗಾಣ ರಾಜ್ಯ ಮಾಜಿ ಮುಖ್ಯಮಂತ್ರಿ ಕೆ ಚಂದ್ರಶೇಖರ್​ ರಾವ್ ಅವರು, ಮನೆಯಲ್ಲಿ ಕಾಲು ಜಾರಿ ಬಿದ್ದು ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆಂದು ತಿಳಿದುಬಂದಿದೆ,ಜಾರಿ ಬಿದ್ದ ಪರಿಣಾಮ ಮೂಳೆ ಮುರಿತದಿಂದ ಚಂದ್ರಶೇಖರ್ ರಾವ್ ಅವರು ಬಳಲುತ್ತಿದ್ದಾರೆಂದು ವರದಿಗಳು ತಿಳಿಸಿವೆ.

    ಸದ್ಯ ಸೋಮಾಜಿಗುಡಾದ ಯಶೋಧಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೆಸಿಆರ್ ಅನಾರೋಗ್ಯದ ವಿಷಯ ತಿಳಿದ ತಕ್ಷಣ ಕುಟುಂಬಸ್ಥರೆಲ್ಲಾ ಆಸ್ಪತ್ರೆಗೆ ಧಾವಿಸಿದ್ದಾರೆ.

 
     ಕೆಸಿಆರ್ 2014 ರಿಂದ 2023ರ ವರೆಗೆ ತೆಲಂಗಾಣ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು. ಆದ್ರೆ ಇತ್ತೀಚೆಗೆ ಮುಕ್ತಾಯಗೊಂಡ ವಿಧಾನಸಭಾ ಚುನಾವಣೆಯಲ್ಲಿ ಕೆಸಿಆರ್ ನೇತೃತ್ವದ ಭಾರತ್ ರಾಷ್ಟ್ರ ಸಮಿತಿ (BRS) ಅನ್ನು ಕಾಂಗ್ರೆಸ್ ಸೋಲಿಸಿತು. ರೇವಂತ್ ರೆಡ್ಡಿ ಅವರು ತೆಲಂಗಾಣದ ನೂತನ ಮುಖ್ಯಮಂತ್ರಿಯಾಗಿ 11 ಸಚಿವರೊಂದಿಗೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap