ಹೈದರಾಬಾದ್:
ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ತೆಲಂಗಾಣ ಮಾಜಿ ಸಿಎಂ ಮತ್ತು ಬಿಆರ್‌ಎಸ್ ಪಕ್ಷದ ರಾಷ್ಟ್ರೀಯ ನಾಯಕ ಕೆ ಚಂದ್ರಶೇಖರ ರಾವ್ ಅವರು ಶುಕ್ರವಾರ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ತೆಲಂಗಾಣ ಮಾಜಿ ಸಿಎಂ ಮತ್ತು ಬಿಆರ್‌ಎಸ್ ಪಕ್ಷದ ರಾಷ್ಟ್ರೀಯ ನಾಯಕ ಕೆ ಚಂದ್ರಶೇಖರ ರಾವ್ ಅವರು ಶುಕ್ರವಾರ ಹೈದರಾಬಾದ್‌ನ ಯಶೋದಾ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
69 ವರ್ಷದ ಕೆಸಿಆರ್ ಅವರು ಡಿಸೆಂಬರ್ 7 ರಂದು ಎರ್ರವಳ್ಳಿಯಲ್ಲಿರುವ ತಮ್ಮ ಫಾರ್ಮ್‌ಹೌಸ್‌ನಲ್ಲಿ ಬಿದ್ದು ಸೋಮಾಜಿಗುಡದ ಯಶೋದಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು ಇದೀಗ ಚೇತರಿಕೆ ಕಂಡು ಬಂದ ಹಿನ್ನೆಲೆಯಲ್ಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಈ ಕುರಿತು ಮಾಹಿತಿ ನೀಡಿದ ಯಶೋದಾ ಆಸ್ಪತ್ರೆಯ ವೈದ್ಯರು ಕೆಸಿಆರ್ ಅವರಿಗೆ ನಡೆಸಿದ ಶಸ್ತ್ರಚಿಕಿತ್ಸೆ ಯಶ್ವಿಯಾಗಿದೆ. ಅಲ್ಲದೆ ಇದೀಗ ಗುಣಮುಖರಾಗುತ್ತಿದ್ದು ಹೆಚ್ಚಿನ ವಿಶ್ರಾಂತಿಯ ಅಗತ್ಯವಿದೆ ಎಂದು ಹೇಳಿದ್ದಾರೆ.
ಕೆಸಿಆರ್ ಆಸ್ಪತ್ರೆಯಿಂದ ನಿರ್ಗಮಿಸಿದ ವಿಡಿಯೋ ಕೂಡ ಶುಕ್ರವಾರ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.