ಶಿರಸಿ
ಉತ್ತರ ಕನ್ನಡ ಜಿಲ್ಲೆಯ ಶಿರಸಿ ಕೆಡಿಸಿಸಿ ಬ್ಯಾಂಕ್ 2024 -25 ನೇ ಸಾಲಿನಲ್ಲಿ ಉತ್ತಮ ಸಾಧನೆ ತೋರಿದ್ದು 25.11 ಕೋಟಿ ರೂಪಾಯಿ ನಿವ್ವಳ ಲಾಭ ಗಳಿಸಿದೆ. ಇಂದು ಬ್ಯಾಂಕಿನ ಪ್ರಧಾನ ಕಚೇರಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಬ್ಯಾಂಕಿನ ಅಧ್ಯಕ್ಷ ಶಿವರಾಮ ಹೆಬ್ಬಾರ್ ಈ ವಿಷಯ ತಿಳಿಸಿದರು.ಬ್ಯಾಂಕಿನ ಶೇರು ಬಂಡವಾಳ 131.28 ಕೋಟಿಗಳಿಂದ 145.11 ಕೋಟಿ ರೂಗೆ ಏರಿಕೆಯಾಗಿದೆ ಎಂದು ಅವರು ತಿಳಿಸಿದರು.
ಬ್ಯಾಂಕ್ ಈಗಾಗಲೇ ಕೋರ್ ಬ್ಯಾಂಕಿಂಗ್ ತಂತ್ರಜ್ಞಾನವನ್ನು ಅಳವಡಿಸಿಕೊಂಡಿದ್ದು,ಗ್ರಾಹಕರಿಗೆ ವಿವಿಧ ಸೇವೆಗಳನ್ನು ನೀಡುತ್ತಿದೆ.ಜಿಲ್ಲೆಯಲ್ಲಿ ಬ್ಯಾಂಕ್ ಸ್ವಂತ 7 ಎಟಿಎಂ ಗಳನ್ನು ಹೊಂದಿರುತ್ತದೆ ಅಲ್ಲದೆ ಗ್ರಾಹಕರ ಅನುಕೂಲಕ್ಕಾಗಿ ಮೊಬೈಲ್ ಎಟಿಎಂ ವ್ಯವಸ್ಥೆಯನ್ನು ಸಹ ಅಳವಡಿಸಿಕೊಳ್ಳಲಾಗಿದೆ. ಜಿಲ್ಲೆಯ ಆಯ್ದ ಸಂಘಗಳಲ್ಲಿ ನಬಾರ್ಡ್ ಸಹಯೋಗದೊಂದಿಗೆ ಮೈಕ್ರೋ ಎಟಿಎಂ ಸೇವೆಯನ್ನು ಸಹ ಅಳವಡಿಸಿಕೊಳ್ಳಲಾಗಿದೆ.
ಪ್ರಸಕ್ತ ವರ್ಷದಲ್ಲಿ ಬ್ಯಾಂಕ್ ಹೊಸದಾಗಿ 21 ಶಾಖೆಗಳನ್ನು ಆರಂಭಿಸಿದ್ದು ತನ್ಮೂಲಕ ಗ್ರಾಹಕರಿಗೆ ಸುಲಭ ಬ್ಯಾಂಕಿಂಗ್ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಜಿಲ್ಲೆಯಲ್ಲಿ ಶಿಕ್ಷಣಕ್ಕೆ ಉತ್ತೇಜನ ನೀಡುವ ಬಗ್ಗೆ ಅತಿ ಕಡಿಮೆ ಬಡ್ಡಿ ದರದಲ್ಲಿ ಶಿಕ್ಷಣ ಸಾಲವನ್ನು 2021 ರಿಂದ ಜಾರಿಯಲ್ಲಿ ತರಲಾಗಿದೆ ಎಂದೂ ಅಧ್ಯಕ್ಷ ಶಿವರಾಮ ಹೆಬ್ಬಾರ್ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಬ್ಯಾಂಕಿನ ಉಪಾಧ್ಯಕ್ಷ ಮೋಹನದಾಸ ನಾಯಕ ಹಾಗೂ ಎಲ್ ಟಿ ಪಾಟೀಲ್ ಸೇರಿದಂತೆ ನಿರ್ದೇಶಕರುಗಳು ಉಪಸ್ಥಿತರಿದ್ದರು.








