ನವದೆಹಲಿ:
ಮದ್ಯ ನೀತಿ ಪ್ರಕರಣದಲ್ಲಿನ ಅಕ್ರಮಗಳಿಗೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜಾರಿ ನಿರ್ದೇಶನಾಲಯ ಗುರುವಾರ ಏಳನೇ ಬಾರಿಗೆ ಸಮನ್ಸ್ ಜಾರಿ ಮಾಡಿದೆ. ಫೆಬ್ರವರಿ 26 ರಂದು ಇಡಿ ಮುಂದೆ ಹಾಜರಾಗುವಂತೆ ದೆಹಲಿ ಸಿಎಂಗೆ ತಿಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ದೆಹಲಿ ಅಬಕಾರಿ ನೀತಿ 2021-22 ಪ್ರಕರಣದಲ್ಲಿನ ಅಕ್ರಮಗಳಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ತನಿಖೆಯಲ್ಲಿ ಫೆಬ್ರವರಿ 14 ರಂದು ಜಾರಿ ನಿರ್ದೇಶನಾಲಯ ದೆಹಲಿ ಮುಖ್ಯಮಂತ್ರಿಗೆ ಆರನೇ ಸಮನ್ಸ್ ನೀಡುವ ಮೂಲಕ ಫೆಬ್ರವರಿ 19 ರಂದು ವಿಚಾರಣೆಗೆ ಹಾಜರಾಗುವಂತೆ ಕೋರಿತ್ತು. ಆದರೆ, ಆರು ಬಾರಿಯೂ ವಿಚಾರಣೆಗೆ ಕೇಜ್ರಿವಾಲ್ ಗೈರಾಗಿದ್ದರು.