ನವದೆಹಲಿ:
ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಮಧ್ಯಂತರ ಜಾಮೀನನ್ನು ಇನ್ನೂ ಏಳು ದಿನಗಳ ಕಾಲ ವಿಸ್ತರಿಸುವಂತೆ ಕೋರಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.
ಲೋಕಸಭೆ ಚುನಾವಣೆಗೆ ಪ್ರಚಾರ ಮಾಡಲು ಅನುಕೂಲವಾಗುವಂತೆ ಮೇ 10 ರಂದು ಸುಪ್ರೀಂ ಕೋರ್ಟ್ ಅವರಿಗೆ 21 ದಿನಗಳ ಅವಧಿಗೆ ಮಧ್ಯಂತರ ಜಾಮೀನು ನೀಡಿತ್ತು.