ತಿರುವನಂತಪುರ:
ಇತ್ತೀಚೆಗಷ್ಟೇ ಶತಮಾನದ ಮಹಾ ಮಳೆಗೆ ತತ್ತರಿಸಿ, ಈಗ ತಾನೇ ಚೇತರಿಸಿಕೊಳ್ಳುತ್ತಿರುವ ಕೇರಳಕ್ಕೆ ಮತ್ತೆ ಮಹಾ ಮಳೆಯ ಭೀತಿ ಎದುರಾಗಿದೆ.
ಶ್ರೀಲಂಕಾಕ್ಕೆ ಸನಿಹದ ಪ್ರಾಂತ್ಯವೊಂದರಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನಲೆಯಲ್ಲಿ ದೈತ್ಯ ಚಂಡ ಮಾರುತದ ಅಲೆಗಳು ಸೃಷ್ಟಿಯಾಗಿದ್ದು ತಮಿಳುನಾಡು, ಕೇರಳ ಮತ್ತು ಲಕ್ಷದ್ವೀಪ ಪ್ರದೇಶಗಳಲ್ಲಿ ಭಾರೀ ಮಳೆಯಾಗಲಿದೆ. ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಎಲ್ಲಾ ತುರ್ತು ನೆರವಿಗೆ ಸಿದ್ಧತೆಗಳನ್ನು ನಡೆಸಲು ಸೂಚನೆ ನೀಡಿದ್ದಾರೆ ಮಾತ್ರವಲ್ಲದೆ ಕೇಂದ್ರ ಸರ್ಕಾರದ ನೆರವನ್ನೂ ಕೇಳಿದ್ದಾರೆ. ಈಗಾಗಲೆ ಎನ್‌ಡಿಆರ್‌ಎಫ್ನ 5 ತಂಡಗಳನ್ನು ಕೇರಳಕ್ಕೆ ಕಳುಹಿಸಲಾಗಿರುವ ಬಗ್ಗೆ ವರದಿಯಾಗಿದೆ.
ಬುಧವಾರ ಸಂಜೆಯಿಂದ ತ್ರಿಶೂರ್‌ನಲ್ಲಿ ಭಾರೀ ಗಾಳಿಯೊಂದಿಗೆ ಮಳೆ ಆರಂಭವಾಗಿದ್ದು, ಜನ ಜೀವನ ಅಸ್ತವ್ಯಸ್ತ ವಾಗಿದೆ. ಪ್ರವಾಸಿಗರಿಗೆ ಮುನ್ನೆಚ್ಚರಿಕೆ ನೀಡಲಾಗಿದ್ದು, ಸಮುದ್ರ ತೀರ ಪ್ರದೇಶಗಳು ಮತ್ತು ಗುಡ್ಡಗಾಡು ಪ್ರದೇಶಗಳಿಗೆ ತೆರಳದಂತೆ ಸೂಚನೆ ನೀಡಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








