ತಿರುವನಂತಪುರಂ:
ದೇಶಾದ್ಯಂತ ಎಲ್ಲ ದೇವಸ್ಥಾನಗಳು ಈಗಾಗಲೇ ತೆರೆದಿದ್ದು, ಭಕ್ತರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಆದರೆ ಕೇರಳದಲ್ಲಿರುವ ಪ್ರಸಿದ್ಧ ಶಬರಿಮಲೆ ದೇಗುಲದಲ್ಲಿ ಮಾತ್ರ ಭಕ್ತರ ಅವಕಾಶಕ್ಕೆ ಪ್ರವೇಶ ನಿರಾಕರಣೆ ಮಾಡಲಾಗಿದೆ.
ಮುಜರಾಯಿ ಸಚಿವ ಕಡಕಂಪಳ್ಳಿ ಸುರೇಂದ್ರನ್ ನೇತೃತ್ವದಲ್ಲಿ, ಅಧಿಕಾರಿಗಳು ಪಾಲ್ಗೊಂಡಿದ್ದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ದೇವಸ್ಥಾನದಲ್ಲಿ ನಡೆಯುತ್ತಿದ್ದ ತಿಂಗಳ ಪೂಜೆ ಹಾಗೂ ಹಬ್ಬ ನಡೆಸದಂತೆ ಈಗಾಗಲೇ ನಿರ್ಧರಿಸಲಾಗಿದ್ದು, ಜೂನ್ 19ರಿಂದ ಆರಂಭಗೊಳ್ಳಬೇಕಾಗಿದ್ದ ದೇವಸ್ಥಾನದ ಜಾತ್ರೆ ರದ್ಧುಗೊಳಿಸಲಾಗಿದೆ ಎಂದು ಸ್ಪಷ್ಟ ಪಡಿಸಿದ್ದಾರೆ. ಈ ಮೂಲಕ 14ರಂದು ಆರಂಭಗೊಳ್ಳಬೇಕಿದ್ದ ದೇಗುಲ ಪ್ರವೇಶ ಮುಂದೂಡಿದಂತಾಗಿದೆ.
ದೇವಸ್ಥಾನಕ್ಕೆ ಆಗಮಿಸುವ ಭಕ್ತರ ಆರೋಗ್ಯದ ದೃಷ್ಟಿಯನ್ನು ಮುಖ್ಯವಾಗಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ದೇಗುಲದ ಮುಖ್ಯ ಅರ್ಚಕ ಮಹೇಶ್ ಮೋಹನಾರು ಹೇಳಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ