ಶಬರಿಮಲೆಯ 800 ವರ್ಷಗಳ ಸಂಪ್ರದಾಯಕ್ಕೆ ಬ್ರೇಕ್ !!?

ತಿರುವನಂತಪುರ: 

     50 ವರ್ಷಕ್ಕಿಂತ ಕಡಿಮೆ ವಯಸ್ಸಿನ ಇಬ್ಬರು ಮಹಿಳೆಯರು ಬುಧವಾರ ನಸುಕಿನಲ್ಲಿ ಶಬರಿಮಲೆ ದೇಗುಲ ಪ್ರವೇಶಿಸಿ ಇತಿಹಾಸ ನಿರ್ಮಿಸಿದ್ದಾರೆ.

        ಸುಮಾರು 40 ವರ್ಷ ವಯಸ್ಸಿನ ಬಿಂದು ಮತ್ತು ಕನಕದುರ್ಗಾ ಎಂಬುವವರು ಮುಂಜಾವ ದೇಗುಲ ಪ್ರವೇಶಿಸಿದ್ದಾರೆ ಎಂದು ಉನ್ನತ ಪೊಲೀಸ್ ಮೂಲಗಳು ತಿಳಿಸಿವೆ ಎನ್ನಲಾಗಿದೆ. ಸೋಮವಾರ ಮಧ್ಯರಾತ್ರಿ ಶಬರಿಮಲೆ ಏರಲು ಆರಂಭಿಸಿದ್ದ ಭಕ್ತೆಯರು ನಸುಕಿನ ಜಾವ 3.45ಕ್ಕೆ ದೇಗುಲ ತಲುಪಿದ್ದು, ಅಯ್ಯಪ್ಪನಿಗೆ ಪ್ರಾರ್ಥನೆ ಸಲ್ಲಿಸಿ ವಾಪಸಾಗಿದ್ದಾರೆ. ಮಫ್ತಿಯಲ್ಲಿದ್ದ ಹಾಗೂ ಸಮವಸ್ತ್ರದಲ್ಲಿದ್ದ ಪೊಲೀಸರ ತಂಡ ಮಹಿಳೆಯರಿಗೆ ಭದ್ರತೆ ಒದಗಿಸಿದೆ.

      ಶಬರಿಮಲೆ ದೇಗುಲಕ್ಕೆ ಯುವತಿಯರ ಪ್ರವೇಶದ ಹಿನ್ನೆಲೆಯಲ್ಲಿ ಶುದ್ಧೀಕರಣ ಪ್ರಕ್ರಿಯೆ ಆರಂಭವಾಗಿದ್ದು, ದೇಗುಲದ ಬಾಗಿಲು ಮುಚ್ಚಲಾಗಿದೆ.

      ಸಾಂಪ್ರದಾಯಿಕವಾಗಿ 10ರಿಂದ 50 ವರ್ಷದ ಋತುಮತಿಯಾಗುವ ವಯೋಮಾನದ ಮಹಿಳೆಯರಿಗೆ ದೇಗುಲ ಪ್ರವೇಶಕ್ಕೆ ಅವಕಾಶವಿಲ್ಲ.  ಆದರೆ ಸೆಪ್ಟೆಂಬರ್ 28ರಂದು ಈ ಕುರಿತು ಸುಪ್ರೀಂ ಕೋರ್ಟ್ ನೀಡಿದ ತೀರ್ಪಿನಲ್ಲಿ ಎಲ್ಲ ವಯೋಮಾನದ ಮಹಿಳೆಯರಿಗೆ ದೇಗುಲ ಪ್ರವೇಶಕ್ಕೆ ಮುಕ್ತ ಅವಕಾಶ ಕಲ್ಪಿಸಿತ್ತು.  

      ಈ ಇಬ್ಬರು ಮಹಿಳೆಯರೂ ಡಿಸೆಂಬರ್ 18 ರಂದೇ ದೇವಾಲಯ ಪ್ರವೇಶಕ್ಕೆ ಯತ್ನಿಸಿದ್ದರು. ಆದರೆ ಆಗ ಸಾಧ್ಯವಾಗಿರಲಿಲ್ಲ. ಆದರೆ ಇದೀಗ ಪೊಲೀಸ್ ರಕ್ಷಣೆಯೊಂದಿಗೆ ದೇವಾಲಯ ಪ್ರವೇಶಿಸುವ ಮೂಲಕ ಎಂಟು ನೂರು ವರ್ಷಗಳ ಸಂಪ್ರದಾಯಕ್ಕೆ ಬ್ರೇಕ್ ಹಾಕಿದ್ದಾರೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

 

Recent Articles

spot_img

Related Stories

Share via
Copy link
Powered by Social Snap