ಹೊಸದಿಲ್ಲಿ:
ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಸಂಸದ ಎಂಐ ಶಾನವಾಸ್(67) ಅನಾರೋಗ್ಯದ ಹಿನ್ನೆಲೆಯಲ್ಲಿ ಬುಧವಾರ ಬೆಳಗ್ಗಿನ ಜಾವ ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಇತ್ತೀಚೆಗೆ ಕೇರಳ ಕಾಂಗ್ರೆಸ್‌ನ ಕಾರ್ಯಕಾರಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದ ಶಾನವಾಸ್ ನ.1 ರಂದು ಚೆನ್ನೈನ ಆರ್‌ಎಂಆರ್‌ಸಿ ಆಸ್ಪತ್ರೆಗೆ ದಾಖಲಾಗಿದ್ದರು. ಇಂದು ಬೆಳಗ್ಗೆ 1:30ರ ಸುಮಾರಿಗೆ ನಿಧನರಾಗಿದ್ದಾರೆ.
ನ.2 ರಂದು ಲಿವರ್ ಕಸಿಗೆ ಒಳಗಾಗಿದ್ದ ಅವರಿಗೆ ಇನ್‌ಫೆಕ್ಷನ್ ಆಗಿರುವ ಹಿನ್ನೆಲೆಯಲ್ಲಿ ಪರಿಸ್ಥಿತಿ ಗಂಭೀರವಾಗಿತ್ತು. ಕಳೆದ ಕೆಲವು ದಿನಗಳಿಂದ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಲಿವರ್ ಜೋಡಣೆಯ ನಂತರ ಕಂಡುಬಂದ ಕೆಲವು ಆರೋಗ್ಯ ಸಂಬಂಧೀ ಸಮಸ್ಯೆಯಿಂದ ಅವರು ಚೆನ್ನೈನ ಆಸ್ಪತ್ರೆಯೊಂದರಲ್ಲಿ ನಿಧನರಾದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
