ತಿರುವನಂತಪುರಂ:
ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೇರಳ ರಾಜ್ಯದಲ್ಲಿ ಮೇ 8ರಿಂದ 16ರವರೆಗೆ ಸಂಪೂರ್ಣ ಲಾಕ್ ಡೌನ್ ಘೋಷಿಸಲಾಗಿದೆ.
ಕೇರಳ ಮುಖ್ಯಮಂತ್ರಿ ವಿಜಯನ್ ಪಿಣರಾಯ್ ಕಚೇರಿ ಟ್ವೀಟ್ ಮಾಡಿದ್ದು, ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಮೇ 8ರಿಂದ 16ರವರೆಗೆ ಸಂಪೂರ್ಣ ಲಾಕ್ ಡೌನ್ ಜಾರಿ ಮಾಡಲು ಮುಖ್ಯಮಂತ್ರಿಗಳು ಆದೇಶಿಸಿದ್ದಾರೆ ಎಂದು ಪ್ರಕಟಿಸಿದೆ.
ಕೇರಳದಲ್ಲಿ ಬುಧವಾರ ಒಂದೇ ದಿನ ದಾಖಲೆಯ 41,953 ಕೊರೊನಾ ಸೋಂಕು ಪ್ರಕರಣಗಳು ವರದಿಯಾಗಿದ್ದು, ಕೇರಳದಲ್ಲಿ ಪರಸ್ಥಿತಿ ಬಿಗಡಾಯಿಸುವ ಮುನ್ನ ಜನರು ಎಚ್ಚೆತ್ತುಕೊಳ್ಳಬೇಕು ಎಂದು ಪಿಣರಾಯ್ ಮನವಿ ಮಾಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ