ಬೆಂಗಳೂರು:
ಕುಟುಂಬದ ಪ್ರತಿ ಸದಸ್ಯರಿಗೆ 10 ಕೆಜಿ ಅಕ್ಕಿ ಒದಗಿಸುವ ‘ಅನ್ನಭಾಗ್ಯ’ ಯೋಜನೆ ಸರ್ಕಾರಕ್ಕೆ ಸವಾಲಾಗಿ ಪರಿಣಮಿಸಿದೆ. ಜುಲೈ 1 ರಂದು ಯೋಜನೆ ಚಾಲನೆಗೊಳಿಸಲು ಸರ್ಕಾರ ಉದ್ದೇಶಿಸಿತ್ತು. ಆದರೆ, ಕೇಂದ್ರ ಸರ್ಕಾರ ಹೆಚ್ಚುವರಿ ಅಕ್ಕಿ ಪೂರೈಕೆಗೆ ನಿರಾಕರಿಸಿದ್ದು, ಯೋಜನೆ ವಿಳಂಬವಾಗುವ ಸಾಧ್ಯತೆ ಹೆಚ್ಚಾಗಿದೆ.
ಈ ಸಂಬಂಧ ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ಅವರಿಂದು ಕೇಂದ್ರ ಆಹಾರ ಸಚಿವ ಪಿಯೂಷ್ ಗೋಯೆಲ್ ಅವರನ್ನು ಭೇಟಿ ಮಾಡಿದ್ದು, ಅಕ್ಕಿ ಪೂರೈಕೆ ಸಂಬಂಧ ಮಾತುಕತೆ ನಡೆಸಿದ್ದಾರೆ.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕೆ. ಹೆಚ್. ಮುನಿಯಪ್ಪ, ಹೆಚ್ಚುವರಿ ಅಕ್ಕಿ ಪೂರೈಕೆಗೆ ಕೇಂದ್ರ ಸಚಿವರು ನಿರಾಕರಿಸಿದ್ದು, ಹಾರಿಕೆಯ ಉತ್ತರ ನೀಡಿದ್ದಾರೆ. ಭಾರತೀಯ ಆಹಾರ ನಿಗಮ ಬಳಿ ದಾಸ್ತಾನು ಇದ್ದರೂ ಅಕ್ಕಿ ಕೊಡಲು ಆಗುವುದಿಲ್ಲ ಎಂದಿದ್ದಾರೆ. ಇದರಲ್ಲಿ ರಾಜಕೀಯ ದುರುದ್ದೇಶ ಎದ್ದು ಕಾಣುತ್ತಿದೆ ಎಂದು ಆರೋಪಿಸಿದರು.
ಎಷ್ಟೇ ಕಷ್ಟವಾದರೀೂ ಉಚಿತವಾಗಿ ಅಕ್ಕಿ ಕೊಡುತ್ತೇವೆ, ನಮ್ಮದೇ ಆದ ದಾರಿ ಕಂಡುಕೊಳ್ಳುತ್ತೇವೆಏಜೆನ್ಸಿಗಳ ಮೂಲಕ ಅಕ್ಕಿ ಖರೀದಿಗೆ ಪ್ರಯತ್ನ ಮಾಡುತ್ತೇವೆ, ಈ ಬಗ್ಗೆ ಈ ವಾರದಲ್ಲಿ ತೀರ್ಮಾನವಾಗಲಿದೆ. ವಿಳಂಬ ಆದ್ರೂ ಅಕ್ಕಿ ಕೊಟ್ಟೇ ಕೊಡುತ್ತೇವೆ ಎಂದು ಮುನಿಯಪ್ಪ ಹೇಳಿದರು.