ಸರ್ವರನ್ನೂ ಸಮಾನವಾಗಿ ಕಾಣುತ್ತಿದ್ದ ಮಿತ್ರ ಧ್ರುವನಾರಾಯಣ್- ಈಶ್ವರ ಖಂಡ್ರೆ

ಬೆಂಗಳೂರು:

     ಅಕಾಲಿಕವಾಗಿ ಅಗಲಿದ ಧ್ರುವನಾರಾಯಣ್ ಅವರು ವಿಶಿಷ್ಟ ವ್ಯಕ್ತಿತ್ವದ ನಾಯಕರಾಗಿದ್ದರು. ಎಲ್ಲ ಜಾತಿ, ಧರ್ಮ, ಭಾಷೆಯ ಜನರನ್ನು ಸಮಾನವಾಗಿ ಕಂಡು, ಎಲ್ಲರನ್ನೂ ಜೊತೆಯಲ್ಲಿ ತೆಗೆದುಕೊಂಡು ಹೋಗುತ್ತಿದ್ದರು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದರು.

    ವಿಧಾನಸಭೆಯಲ್ಲಿಂದು ಸಂತಾಪ ಸೂಚಕ ನಿರ್ಣಯದ ಮೇಲೆ ಮಾತನಾಡಿದ ಈಶ್ವರ ಖಂಡ್ರೆ ಅವರು, ಧ್ರುವ ನಾರಾಯಣ್ ಅಜಾತಶತ್ರುವಾಗಿದ್ದರು, ತಮ್ಮ ರಾಜಕೀಯ ಬದುಕಿನಲ್ಲಿ ಅವರು ಅಕ್ಷರಶಃ ಸರ್ವಧರ್ಮ ಸಹಿಷ್ಣುತೆ, ಸಹಬಾಳ್ವೆಯಂತೆ ನಡೆದಿದ್ದಾರೆ. ಅವರಿಗೆ ಯಾವುದೇ ಹುದ್ದೆ ಕೊಟ್ಟರೂ ಸಮರ್ಥವಾಗಿ ನಿಭಾಯಿಸುತ್ತಿದ್ದರು.

    ಸಂಸದರಾಗಿ ಅವರು ಈ ನೆಲದ ಜ್ವಲಂತ ಸಮಸ್ಯೆಗಳ ಬಗ್ಗೆ ಲೋಕಸಭೆಯಲ್ಲಿ ಪ್ರಸ್ತಾಪಿಸುತ್ತಿದ್ದರು . ಈ ನಾಡಿನ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ.ಶಾಸಕರಾಗಿಯೂ ಅವರು, ಉತ್ತಮ ಕಾರ್ಯ ಮಾಡಿದ್ದಾರೆ. ಸಂಘಟನಾ ಚತರುರರಾಗಿದ್ದ ಅವರೊಂದಿಗೆ ಒಟ್ಟಾಗಿ ಕೆಲಸ ಮಾಡಿದ್ದೇನೆ. ಒಳ್ಳೆಯವರನ್ನು ದೇವರು ಬೇಗ ಕರೆದುಕೊಳ್ಳುತ್ತಾನೆ. ಹೀಗಾಗಿ ಧ್ರುವ ನಾರಾಯಣ್ ನಮ್ಮನ್ನು ಅಗಲಿದ್ದಾರೆ ಎಂದು ತಿಳಿಸಿ ಶ್ರದ್ಧಾಂಜಲಿ ಸಲ್ಲಿಸಿದರು.

    ಕಳೆದ ಅಧಿವೇಶನದಿಂದ ಈ ಅಧಿವೇಶನದ ಅವಧಿಯಲ್ಲಿ ಅಗಲಿದ ಅಂಜನಮೂರ್ತಿ, ಡಿ.ಬಿ. ಇನಾಂದಾರ್, ವೆಂಕಟಸ್ವಾಮಿ, ಕೆ. ಭುಜಂಗಶೆಟ್ಟಿ ಮೊದಲಾದವರು ತಮ್ಮ ತಮ್ಮ ಕ್ಷೇತ್ರದಲ್ಲಿ ಅದ್ಭುತ ಸಾಧನೆ ಮಾಡಿದ್ದಾರೆ. ಇವರೆಲ್ಲರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸಿ, ಶ್ರದ್ಧಾಂಜಲಿ ಸಲ್ಲಿಸಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap