ಮಾಹಿತಿ ಪಡೆದ ನಂತರ ಮಾತನಾಡುತ್ತೇನೆ : ಖರ್ಗೆ

ಕಲಬುರಗಿ:

    ಇಂಡಿಯಾ ಮೈತ್ರಿಕೂಟ ಒಟ್ಟಾಗಿರಲು ಪ್ರಯತ್ನ ಮಾಡುತ್ತಿದ್ದೇವೆ. ಮೈತ್ರಿಕೂಟವು ಒಗ್ಗಟ್ಟು ಕಾಯ್ದುಕೊಳ್ಳುವ ಬಗ್ಗೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ, ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಸೇರಿದಂತೆ ಎಲ್ಲರಿಗೂ ಪತ್ರ ಬರೆದಿದ್ದೇ‌ನೆ. ಹೀಗಾಗಿ ಇನ್ನು ಆ ವಿಚಾರದ ಬಗ್ಗೆ ಈಗ ಹೇಳಿಕೆ ಕೊಟ್ಟರೆ ಗೊಂದಲ ಆಗುತ್ತದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

   ಇಂದು ಕಲಬುರಗಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ನಾಳೆ ಭಾನುವಾರ ಡೆಹ್ರಾಡೂನ್​​ಗೆ ಹೋಗಿ ಮಾಹಿತಿ ಪಡೆದುಕೊಂಡು ನಂತರ ಮಾತನಾಡುತ್ತೇನೆ. ಇಂಡಿಯಾ ಒಕ್ಕೂಟದಿಂದ ಎಲ್ಲರೂ ಸ್ಪರ್ಧೆ ಮಾಡಿದರೆ ಒಳ್ಳೆಯದಾಗಲಿದೆ ಎಂದು ಅವರು ಹೇಳಿದರು.

   ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಸಿಎಂ ಸ್ಥಾನಕ್ಕೆ ರಾಜಿನಾಮೆ ನೀಡುವ ಬಗ್ಗೆ ಮಾಹಿತಿಯಿಲ್ಲ. ಅವರು ರಾಜ್ಯಪಾಲರನ್ನು ಭೇಟಿಯಾಗಿದ್ದಾರೋ ಇಲ್ಲವೋ ಗೊತ್ತಿಲ್ಲ. ಪ್ರಜಾಪ್ರಭುತ್ವ ಉಳಿಯಬೇಕಾದರೆ ನಾವು ಒಗ್ಗಟ್ಟಾಗಿರಬೇಕು. ಆ ನಿಟ್ಟಿನಲ್ಲಿ ನಮ್ಮ ಪ್ರಯತ್ನ ಮುಂದುವರಿದಿದೆ ಎಂದು ಹೇಳಿದರು. ಜೆಡಿಯು ಮತ್ತು ಬಿಜೆಪಿ ಮೈತ್ರಿ ಸರ್ಕಾರದ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಯಿದೆ ಎಂದು ಮೂಲಗಳು ಹೇಳಿರುವ ಮತ್ತು ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಏಕಾಂಗಿಯಾಗಿ ಲೋಕಸಭೆ ಚುನಾವಣೆ ಎದುರಿಸಲಿದೆ ಎಂಬ ಮಮತಾ ಹೇಳಿಕೆಗಳ ಬೆನ್ನಲ್ಲೇ ಖರ್ಗೆ ಈ ಹೇಳಿಕೆ ನೀಡಿದ್ದಾರೆ. 

   “ಜೆಡಿಯು ಭಾರತ ಮೈತ್ರಿಯಿಂದ ಹೊರಬರುವ ಬಗ್ಗೆ ನನ್ನ ಬಳಿ ಯಾವುದೇ ಮಾಹಿತಿ ಇಲ್ಲ, ಅವರ ಮನಸ್ಸಿನಲ್ಲಿ ಏನು ಇದೆ ಎಂಬುದು ಸ್ಪಷ್ಟವಾಗಿಲ್ಲ. ನಾನು ನಾಳೆ ಡೆಹ್ರಾಡೂನ್‌ಗೆ ಪ್ರಯಾಣಿಸುತ್ತಿದ್ದೇನೆ, ನಂತರ ದೆಹಲಿಗೆ ಹೋಗುತ್ತಿದ್ದೇನೆ. ಅಲ್ಲಿಗೆ ಹೋಗಿ ಸಂಪೂರ್ಣ ಮಾಹಿತಿಯನ್ನು ಪಡೆದು ನಿಮಗೆ ತಿಳಿಸುತ್ತೇನೆ, ಏನಾಗುತ್ತೋ ನೋಡೋಣ.

   ಎಲ್ಲರನ್ನೂ ಒಗ್ಗೂಡಿಸುವ ಪ್ರಯತ್ನ ನಮ್ಮದು ಅಂತ ಮಮತಾ ಬ್ಯಾನರ್ಜಿ, ಲಾಲು ಪ್ರಸಾದ್ ಯಾದವ್, ಸೀತಾರಾಂ ಯೆಚೂರಿ ಜೊತೆ ಮಾತನಾಡಿದ್ದೇನೆ, ಒಗ್ಗೂಡಿದರೆ ಉತ್ತಮ ಹೋರಾಟ ನೀಡುತ್ತೇವೆ, ಭಾರತ ಮೈತ್ರಿ ಯಶಸ್ವಿಯಾಗುತ್ತದೆ. .ಪ್ರಜಾಪ್ರಭುತ್ವವನ್ನು ಉಳಿಸುವ ಆಸಕ್ತಿ ಇರುವವರು ತಮ್ಮ ಮನಸ್ಸನ್ನು ಬದಲಾಯಿಸುವುದಿಲ್ಲ ಮತ್ತು ನಮ್ಮೊಂದಿಗೆ ಇರುತ್ತಾರೆ ಎಂದರು. 

   ಪಶ್ಚಿಮ ಬಂಗಾಳದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ನ್ಯಾಯ ಯಾತ್ರೆ ಆರಂಭವಾಗಿದೆ. ಮುಂದಿನ ದಿನಗಳಲ್ಲಿ ಅವರು ಹಲವಾರು ಕಾರ್ಯಕ್ರಮಗಳನ್ನು ಹೊಂದಿದ್ದಾರೆ. ಅವುಗಳಲ್ಲಿ ಮಮತಾ ಬ್ಯಾನರ್ಜಿ ಭಾಗವಹಿಸಬೇಕೆಂದು ಕಾಂಗ್ರೆಸ್ ಬಯಸುತ್ತದೆ. ಕೆಲವು ನಿಮಿಷಗಳಾದರೂ ರಾಹುಲ್ ಪರವಾಗಿ ನಿಲ್ಲುವಂತೆ ಮಮತಾ ಅವರಿಗೆ ಕಾಂಗ್ರೆಸ್ ಮನವಿ ಮಾಡಿದೆ. ಈ ವಿಚಾರವಾಗಿ ಮಮತಾ ಜತೆ ಖರ್ಗೆ ಚರ್ಚಿಸಿದ್ದಾರೆ ಎಂದು ಜೈರಾಂ ರಮೇಶ್ ಶುಕ್ರವಾರ ತಿಳಿಸಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap