ಸರಳಾದೇವಿ ಕಾಲೇಜಿನ ಪುರುಷ ಮತ್ತು ಮಹಿಳಾ ಖೋಖೋ ತಂಡಗಳಿಗೆ ಪ್ರಥಮ ಸ್ಥಾನ

ಬಳ್ಳಾರಿ 

       ಜಿಲ್ಲೆಯ ಸಂಡೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ಇತ್ತೀಚೆಗೆ ನಡೆದ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಅಂತರ್ ಮಹಾವಿದ್ಯಾಲಯಗಳ ಖೋ ಖೋ ಪಂದ್ಯಾವಳಿಯಲ್ಲಿ ಬಳ್ಳಾರಿಯ ಶ್ರೀಮತಿ ಸರಳಾದೇವಿ ಕಾಲೇಜಿನ 

 

ಪುರುಷ ಮತ್ತು ಮಹಿಳಾ ಖೋಖೋ ತಂಡಗಳು ಅದ್ಭುತ ಆಟವನ್ನು ಪ್ರದರ್ಶಿಸಿ ಎರಡೂ ತಂಡಗಳು ಪ್ರಥಮ ಸ್ಥಾನವನ್ನು ಗಳಿಸಿವೆ.

      ಗಂಗಾವತಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ತಂಡವನ್ನು ಮಣಿಸಿದ ಸರಳಾದೇವಿ ಕಾಲೇಜಿನ ಪುರುಷರ ಖೋಖೋ ತಂಡವು ಪ್ರಥಮ ಸ್ಥಾನವನ್ನು ಗಳಿಸಿತು. ಅದೇ ರೀತಿ ಕುರುಗೋಡಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಮಹಿಳಾ ಖೋಖೋ ತಂಡವನ್ನು ಸರಳಾದೇವಿ ಕಾಲೇಜಿನ ಮಹಿಳಾ ವಿಭಾಗದ ಆಟಗಾರರು ಸೋಲಿಸಿ ಪ್ರಥಮ ಸ್ಥಾನವನ್ನು ಗಳಿಸಿಕೊಂಡಿತು.

      ಈ ಎರಡು ತಂಡಗಳಿಗೆ ಶೀಲ್ಡ್ ಮತ್ತು ಪ್ರಮಾಣ ಪತ್ರವನ್ನು ಪ್ರಾಂಶುಪಾಲರು ವಿದ್ಯಾರ್ಥಿಗಳ ಸಮ್ಮುಖದಲ್ಲಿ ಪ್ರದರ್ಶಿಸಿ ಇತರೆ ವಿದ್ಯಾರ್ಥಿಗಳಿಗೆ ಕ್ರೀಡೆಯ ಕುರಿತು ಆಸಕ್ತಿಯನ್ನು ಹೆಚ್ಚಿಸಿದರು. ವಿಜೇತ ತಂಡಗಳನ್ನು ಪ್ರಾಂಶುಪಾಲರಾದ ಪ್ರೊ.ಯು.ಅಬ್ದುಲ್ ಮುತಾಲಿಬ್, ದೈಹಿಕ ಶಿಕ್ಷಣ ನಿರ್ದೇಶಕ ಪಂಪನಗೌಡ ಹಾಗೂ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯವರು ಅಭಿನಂದಿಸಿದ್ದಾರೆ.

                 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link