20 ವರ್ಷ ಕಳೆದರೂ ಪರಿಹಾರ ನೀಡದ ಕೆ.ಐ.ಎ.ಡಿ.ಬಿ ; ನಾವು ಮರಣ ಹೊಂದುವ ಮೊದಲು ಪರಿಹಾರ ಕೊಡಿ; ಸರ್ಕಾರಕ್ಕೆ ವೃದ್ಧರ ಅಳಲು – ವಿಧಾನಸೌಧದ ಮುಂದೆ ಕರಪತ್ರ ಹಂಚಿ ಪ್ರತಿಭಟನೆ ನಡೆಸಿದ ಸಂತ್ರಸ್ತ ರೈತರು

ಬೆಂಗಳೂರು:

ಬೆಂಗಳೂರು, ಮಾ, 24; ರಾಮನಗರ ಜಿಲ್ಲೆಯ ಬಿಡದಿ ಸಮೀಪದ ಟೊಯೋಟ ಕಾರ್ಖಾನೆಗಾಗಿ ಶಾನಮಂಗಳ, ಬಾನಂದೂರು, ಅಬ್ಬಿನಕುಂಟೆ ಗ್ರಾಮಗಳಲ್ಲಿ ವಶಪಡಿಸಿಕೊಂಡಿರುವ ಭೂಮಿಗೆ ಸೂಕ್ತ ಪರಿಹಾರ ನೀಡುವಂತೆ ಒತ್ತಾಯಿಸಿ ಸಣ್ಣ, ಅತಿ ಸಣ್ಣ ವಯೋವೃದ್ಧ ರೈತರು ವಿಧಾನಸೌಧದ ಮುಂಭಾಗ ಸಾಂಕೇತಿಕವಾಗಿ ಕರ ಪತ್ರ ಹಂಚಿ ಪ್ರತಿಭಟನೆ ನಡೆಸಿದರು.

ಹಿರಿಯ ರೈತ ಪತ್ತಿ ಕುಮಾರ ಸ್ವಾಮಿ ನೇತೃತ್ವದಲ್ಲಿ ಭೂಮಿ ಕಳೆದುಕೊಂಡು ಪರಿಹಾರಕ್ಕಾಗಿ ಸುಮಾರು ಎರಡು ದಶಕಗಳಿಂದ ಕಾಯುತ್ತಿರುವ ರೈತರು ಈ ಸಂದರ್ಭದಲ್ಲಿ ಜನ ಸಾಮಾನ್ಯರು, ಪೊಲೀಸರು, ಅಧಿಕಾರಿಗಳಿಗೆ ಕರಪತ್ರ ಹಂಚಿ ಕೆಐಎಡಿಬಿ ಅಧಿಕಾರಿಗಳ ಧೋರಣೆಗೆ ಆಕ್ರೋಶ ವ್ಯಕ್ತಪಡಿಸಿದರು.

ಕೆಐಎಡಿಬಿ ಅಧಿಕಾರಿಗಳ ನಿರ್ಲಕ್ಷ್ಯ ಧೋರಣೆಯಿಂದಾಗಿ ಪರಿಹಾರ ದೊರೆಯುವುದು ವಿಳಂಬವಾಗಿದೆ. ಸರ್ಕಾರ ನ್ಯಾಯಾಲಯದ ಆದೇಶವನ್ನು ಪರಿಪಾಲಿಸಬೇಕು ಎಂದು ಈ ರೈತರು ಒತ್ತಾಯಿಸಿದರು.

 ಯುಗಾದಿ ಇನ್ಮುಂದೆ ಕರ್ನಾಟಕದ ‘ಧಾರ್ಮಿಕ ದಿನ’; ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ

ಪತ್ತಿ ಕುಮಾರ ಸ್ವಾಮಿ ಮಾತನಾಡಿ, ರೈತರಿಗೆ ಪರಿಹಾರ ಒದಗಿಸುವಲ್ಲಿ ಕೆಐಎಡಿಬಿ ನಿರ್ಲಕ್ಷ್ಯ ತೋರುತ್ತಿದೆ. ನಾವು ಬದುಕಿದ್ದಾಗಲೇ ಪರಿಹಾರ ದೊರೆತರೆ ನಮಗೆ ಸಮಾಧಾನವಾಗುತ್ತದೆ. ಕೆಐಎಡಿಬಿ ಜವಾಬ್ದಾರಿ ಹೊಂದಿರುವ ಭಾರೀ ಕೈಗಾರಿಕಾ ಸಚಿವ ಮುರುಗೇಶ‍್ ನಿರಾಣಿ ಅವರು ನಮ್ಮ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಬೇಕು ಎಂದು ಹೇಳಿದರು.

ಮತ್ತೋರ್ವ ರೈತ ಅನಂತ್ ಮಾತನಾಡಿ, ಎ ಖರಾಬು ಭೂಮಿ ಹೊಂದಿರುವವರಿಗೆ ಪರಿಹಾರ ನೀಡಿ ಬಿ ಖರಾಬು ಭೂ ಮಾಲೀಕರಿಗೆ ಅನ್ಯಾಯ ಮಾಡಲಾಗುತ್ತಿದೆ. ಹೀಗಾಗಿ ಸರ್ಕಾರ ತಾರತಮ್ಯ ಮಾಡದೇ ಪರಿಹಾರ ನೀಡಲು ಮುಂದಾಗಬೇಕು. ಈ ಮೂಲಕವಾದರೂ ಹಿರಿಯ ಜೀವಗಳಿಗೆ ನೆಮ್ಮದಿ ಕೊಡಬೇಕು ಎಂದರು.

ST’ ಮೀಸಲಾತಿ ಹೆಚ್ಚಳದ ಕುರಿತಂತೆ ಸಿಎಂ ಬೊಮ್ಮಾಯಿ ಮಹತ್ವದ ಹೇಳಿಕೆ

ಕೆಐಎಡಿಬಿ ಈ ಭಾಗದಲ್ಲಿ 500 ಎಕರೆ ಭೂಮಿ ಸ್ವಾಧೀನಪಡಿಸಿಕೊಂಡಿದ್ದು, ಸಣ್ಣ ಮತ್ತು ಅತಿ ಸಣ್ಣ ರೈತರು ಇದಕ್ಕೆ ಪರಿಹಾರ ಪಡೆಯಲು ಕೆಐಎಡಿಬಿ ಕಚೇರಿಗೆ ಕಳೆದ 20 ವರ್ಷಗಳಿಂದ ಅಲೆದು, ಅಲೆದು ಬಸವಳಿದಿದ್ದಾರೆ. ಪರಿಹಾರ ಎಂಬುದು ಇವರಿಗೆ ಇನ್ನೂ ಮರಿಚಿಕೆಯಾಗಿ ಪರಿಣಮಿಸಿದೆ.

ಬಹುತೇಕ ರೈತರಿಗೆ ವಯಸ್ಸಾಗಿದ್ದು, ವಯೋವೃದ್ಧರಾಗಿದ್ದಾರೆ. ಕೆಲವು ರೈತರು ಮರಣ ಹೊಂದಿದ್ದರೆ, ಬದುಕುಳಿದವರು ಸಂಧ್ಯಾ ಕಾಲದಲ್ಲಾದರೂ ಪರಿಹಾರ ಸಿಗಬಹುದು ಎಂದು ಆಸೆ ಕಂಗಳಿಂದ ಕಾಯುತ್ತಿದ್ದಾರೆ. ಇಂದಲ್ಲಾ ನಾಳೆ ಪರಿಹಾರದ ಹಣ ನೋಡುತ್ತೇವೆ. ಮರಣ ಹೊಂದುವ ಮುನ್ನ ನಮಗೆ ಪರಿಹಾರ ಕೊಡಿ ಎನ್ನುತ್ತಿದ್ದಾರೆ ಈ ರೈತರು.

 

ಇಂದಲ್ಲ ನಾಳೆ ದೊರೆಯಬಹುದು ಎನ್ನುವ ನಿರೀಕ್ಷೆಯಿಂದ ಜಾತಕ ಪಕ್ಷಿಗಳಂತೆ ಈ ರೈತರು ಕಾಯುತ್ತಿದ್ದಾರೆ. ಈ ಕೃಷಿಕರ ಗೋಳು ತಬರನ ಕಥೆಯಂತಾಗಿದೆ. ಆದರೆ ಹೃದಯ ಹೀನ ಕೆ.ಐ.ಎ.ಡಿ.ಬಿ, ಹೃದಯ ಶೂನ್ಯ ಸರ್ಕಾರಕ್ಕೆ ಈಗಲೋ, ಆಗಲೋ ನಿಂತುಹೋಗುವ ನಮ್ಮ ಹೃದಯದ ಆರ್ತನಾದ ಕೇಳುತ್ತಿಲ್ಲ ಎಂದು ಅಳಲು ತೋಡಿಕೊಳ್ಳುತ್ತಿದ್ದಾರೆ ಈ ವಯೋವೃದ್ಧ ರೈತರು.

 

ಪರಿಹಾರ ನೀಡುವಂತೆ ರಾಮನಗರ ಜಿಲ್ಲಾ ನ್ಯಾಯಾಲಯ, ಹೈಕೋರ್ಟ್, ಸುಪ್ರೀಂ ಕೋರ್ಟ್ ಗಳು ನೀಡಿದ ಆದೇಶಗಳಿಗೆ ಕೆಐಎಡಿಬಿ ಅಧಿಕಾರಿಗಳು ಕ್ಯಾರೇ ಎನ್ನುತ್ತಿಲ್ಲ. ರೈತರ ಮನವಿಗೆ ಬೆಲೆ ನೀಡುತ್ತಿಲ್ಲ. ಇದರಿಂದಾಗಿ ಭೂಮಿ ಕಳೆದುಕೊಂಡ ರೈತರು ಕೆಐಎಡಿಬಿ ಕಚೇರಿಗೆ ಅಲೆದು ಅಲೆದು ಪರಿಹಾರದ ಪರಿಹಾರದ ವಿಶ್ವಾಸವನ್ನೇ ಕಳೆದುಕೊಂಡಿದ್ದಾರೆ.

ಶ್ರೀಲಂಕಾದಲ್ಲಿ ಆಹಾರದ ಕೊರತೆ: ಗಗನಕ್ಕೇರಿದ ಅಕ್ಕಿ, ಸಕ್ಕರೆ, ಹಾಲಿನ ಪುಡಿ ಬೆಲೆ!. ಇಲ್ಲಿ ಯಾವ ವಸ್ತುವಿನ ಬೆಲೆ ಎಷ್ಟಿದೆ ಗೊತ್ತಾ?

ಕಳೆದ 1998 ರಲ್ಲಿ ಟೊಯೋಟ ಕಾರ್ಖಾನೆಗಾಗಿ ಈ ಗ್ರಾಮಗಳಲ್ಲಿ ಸ್ವಾಧೀನಪಡಿಸಿಕೊಂಡ ಕೃಷಿ ಭೂಮಿಗೆ ಕೆಐಎಡಿಬಿ ಪರಿಹಾರ ಬಿಡುಗಡೆ ಮಾಡಿದೆ. ಆದರೆ ಎ, ಖರಾಬು ಭೂಮಿಗೆ ಈವರೆಗೆ ನಯಾ ಪೈಸೆ ಪರಿಹಾರ ದೊರೆತಿಲ್ಲ. ಎ ಖರಾಬು ಭೂಮಿ ಸರ್ಕಾರಕ್ಕೆ ಸೇರಿದ್ದು ಎಂದು ರೈತರನ್ನು ಕೆ.ಐ.ಡಿ.ಬಿ. ದಾರಿ ತಪ್ಪಿಸಿತ್ತು.

ಕೆಐಎಡಿಬಿ ವರ್ತನೆಯಿಂದ ರೋಸಿ ಹೋದ ಸುಮಾರು 50 ಮಂದಿ, ಸಣ್ಣ, ಅತಿ ಸಣ್ಣ ರೈತರ ಗುಂಪು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದಾಗ ಎ ಖರಾಬು ಭೂಮಿ ಸರ್ಕಾರದ್ದಲ್ಲ, ಇದು ಭೂ ಮಾಲೀಕರಿಗೆ ಸೇರುತ್ತದೆ. ಹೀಗಾಗಿ ಪರಿಹಾರ ನೀಡುವಂತೆ 2003 ರ ಆಗಸ್ಟ್ 26 ರಂದು ರೈತರ ಮನವಿಯನ್ನು ಪುರಸ್ಕರಿಸಿ ಆದೇಶಿಸಿತು. ಇದೇ ಕಾಲಕ್ಕೆ ಪ್ರಕರಣವನ್ನು ರಾಮನಗರ ಜಿಲ್ಲಾ ನ್ಯಾಯಾಲಯಕ್ಕೆ ವರ್ಗಾಯಿಸಿ ಭೂ ಮಾಲೀಕತ್ವದ ನೈಜತೆಯನ್ನು ಪರಿಶೀಲಿಸಿ ಖರಾಬು ಭೂಮಿ ಹೊಂದಿದವರಿಗೆ ಪರಿಹಾರ ಒದಗಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿತು.

ಆದರೆ ರಾಮನಗರ ನ್ಯಾಯಾಲಯವೂ ಸಹ ಭೂ ಮಾಲೀಕರ ನೈಜತೆಯನ್ನು ಪರಿಗಣಿಸಿ ಆದೇಶ ಜಾರಿ ಮಾಡಲು ಸುದೀರ್ಘ 10 ವರ್ಷ ತೆಗೆದುಕೊಂಡಿತು. 2013 ರಲ್ಲಿ ಸರ್ಕಾರದ ನಿಯಮಾವಳಿಗಳಂತೆ ಪರಿಹಾರ ಬಿಡುಗಡೆ ಮಾಡಬೇಕು ಕೆಐಎಡಿಬಿಗೆ ಆದೇಶ ನೀಡಿತು.

ಬಲವಂತವಾಗಿ ಹಿಜಾಬ್​ ತೆಗೆಸಿದ ಕಂಡಕ್ಟರ್​! ಹಿಡಿಶಾಪ ಹಾಕಿದ ಪ್ರಯಾಣಿಕರೂ ಸತ್ಯ ತಿಳಿದು ಶಾಕ್​

ಆದರೆ ಇದನ್ನು ಪ್ರಶ್ನಿಸಿ ಕೆಐಎಡಿಬಿ ಹೈಕೋರ್ಟ್, ತರುವಾಯ ಸುಪ್ರೀಂ ಕೋರ್ಟ್ ಮೊರೆ ಹೋಯಿತು. ಆದರೆ ಈ ಮೇಲ್ಮನವಿ ಸಂದರ್ಭದಲ್ಲಿ ರಾಮನಗರ ನ್ಯಾಯಾಲಯ ನೀಡಿರುವ ಆದೇಶ ಕ್ರಮ ಬದ್ಧವಾಗಿದೆ. ತಕ್ಷಣವೇ ಪರಿಹಾರ ನೀಡುವಂತೆ ಆದೇಶಿಸಿತು. ಕೆಐಎಡಿಬಿ ವರ್ತನೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ರಾಮನಗರ ನ್ಯಾಯಾಲಯ ಕೆಐಎಡಿಬಿಯನ್ನೇ ಅಟ್ಯಾಚ್ ಮೆಂಟ್ ಮಾಡುವಂತೆ ಮತ್ತೊಂದು ಆದೇಶ ಹೊರಡಿಸಿತು. ಇಷ್ಟಾದರೂ ಕೆಐಎಡಿಬಿ ಅಧಿಕಾರಿಗಳು ಪರಿಹಾರ ನೀಡಲು ಇನ್ನೂ ಮೀನಾ ಮೇಷ ಎಣಿಸುತ್ತಿದ್ದಾರೆ.

ಇವರೇನು ದೊಡ್ಡ ರೈತರಲ್ಲ. ಹತ್ತು ಗುಂಟೆ, ಇಪ್ಪತ್ತು ಗುಂಟೆ, ಒಂದು, ಎರಡು ಎಕರೆ ಭೂಮಿ ಹೊಂದಿರುವ ಸಣ್ಣ, ಅತಿ ಸಣ್ಣ ರೈತರು. ಕೆಐಎಡಿಬಿ ಈ ಭೂಮಿ ಟೊ ಯೋಟಾಗೆ ಹಸ್ತಾಂತರವಾಗಿದ್ದು, ಕೈಗಾರಿಕೆ ಯಶಸ್ವಿಯಾಗಿ ನಡೆಯುತ್ತಿದೆ. ಆದರೆ ಕೈಗಾರಿಕಾಭಿವೃದ್ಧಿಗಾಗಿ ಭೂಮಿ ನೀಡಿದ ರೈತರು ಮಾತ್ರ ಸಂಕಷ್ಟದಲ್ಲಿದ್ದಾರೆ.

  ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap