ಬೆಂಗಳೂರು:
ನಿನ್ನೆ ರಾತ್ರಿ 11.45 ರ ಸುಮಾರಿಗೆ ಘಟನೆ ನಡೆದಿದ್ದು, ಕಾರಿನಲ್ಲಿ ಬಂದಿದ್ದ 5 -6 ಮಂದಿ ಮುಸುಕುಧಾರಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ರೌಡಿಶೀಟರ್ ಪ್ರಶಾಂತ್ ಎಂಬಾತನನ್ನು ಹತ್ಯೆ ಮಾಡಿದ್ದಾರೆ.
ಹಳೆ ದ್ವೇಷವೇ ಕೊಲೆಗೆ ಕಾರಣ ಎನ್ನಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮರಣೋತ್ತರ ಪರೀಕ್ಷೆಗಾಗಿ ಶವವನ್ನು ಅಂಬೇಡ್ಕರ ಆಸ್ಪತ್ರೆಗೆ ರವಾನಿಸಲಾಗಿದೆ.
ಕೊಲೆಯಾದ ಪ್ರಶಾಂತ್ ರೌಡಿ ಶೀಟರ್ ಆಗಿದ್ದು, ಹಲವಾರು ಠಾಣೆಗಳಲ್ಲಿ ಕ್ರಿಮಿನಲ್ ಚಟುವಟಿಕೆಯಲ್ಲಿ ಈತನ ಹೆಸರಿದೆ ಎಂದು ತಿಳಿದುಬಂದಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
