ತೆಲಂಗಾಣ :
ವಿಜಯ್ ದೇವರಕೊಂಡ ನಟನೆಯ ‘ಕಿಂಗ್ಡಮ್’ ಸಿನಿಮಾ ಮೊದಲ ದಿನವೇ ಬಾಕ್ಸ್ ಆಫೀಸ್ ಲೂಟಿ ಮಾಡಿದೆ. ಈ ಚಿತ್ರಕ್ಕೆ ಎಲ್ಲ ಕಡೆಗಳಿಂದ ಪಾಸಿಟಿವ್ ಪ್ರತಿಕ್ರಿಯೆ ಸಿಕ್ಕಿದೆ. ಈ ಚಿತ್ರದ ಮೂಲಕ ಅವರು ಗೆದ್ದು ಬೀಗಿದರು ಎಂದು ಅನೇಕರು ಹೇಳಿದ್ದಾರೆ. ಸಿನಿಮಾದ ಗಳಿಕೆ ದಿನ ಕಳೆದಂತೆ ಹೆಚ್ಚುವ ನಿರೀಕ್ಷೆ ಇದೆ. ವಿಜಯ್ ಮಾಸ್ ಅವತಾರ ಪ್ರೇಕ್ಷಕರಿಗೆ ಇಷ್ಟ ಆಗಿದೆ. ಈ ಚಿತ್ರದ ಗೆಲುವು ಉಳಿದ ಸಿನಿಮಾಗಳ ಮೇಲೆ ಪ್ರಭಾವ ಬೀರುವ ನಿರೀಕ್ಷೆ ಇದೆ.
ವಿಜಯ್ ದೇವರಕೊಂಡ ಅವರು ‘ಲೈಗರ್’ ಸಿನಿಮಾ ಬಳಿಕ ಮಾಸ್ ಅವತಾರ ತಾಳಿರಲಿಲ್ಲ. ಈಗ ‘ಕಿಂಗ್ಡಮ್’ ಸಿನಿಮಾದಲ್ಲಿ ಅವರು ಸಖತ್ ಮಾಸ್ ರೂಪದಲ್ಲಿ ಕಾಣಿಸಿಕೊಂಡಿದ್ದು, ಪ್ರೇಕ್ಷಕರಿಗೆ ಇಷ್ಟ ಆಗಿದೆ. ಸಿನಿಮಾ ಸೂಪರ್ ಹಿಟ್ ಆಗಿದೆ. ಈ ಚಿತ್ರ ಮೊದಲ ದಿನ ಭಾರತದಲ್ಲಿ 16.50 ಕೋಟಿ ರೂಪಾಯಿ ಬಾಚಿಕೊಂಡಿದೆ. ಮೊದಲ ದಿನ ಈ ಚಿತ್ರಕ್ಕೆ ಬಂಪರ್ ಕಲೆಕ್ಷನ್ ಆದಂತೆ ಆಗಿದೆ. ವಿಶ್ವ ಮಟ್ಟದಲ್ಲಿ ಸಿನಿಮಾ 33 ಕೋಟಿ ರೂಪಾಯಿ ಬಾಚಿಕೊಂಡಿದೆ.
