ಸಾಲ ವಾಪಸ್‌ ಕೇಳಿದ್ದಕ್ಕೆ ಪೆಟ್ರೋಲ್‌ ಸುರಿದು ಮನೆಗೆ ಬೆಂಕಿ ಹಚ್ಚಿದ ಕಿರಾತಕ!

ಬೆಂಗಳೂರು:

    ಕೊಟ್ಟ ಸಾಲ ವಾಪಸ್‌ ಕೇಳಿದ್ದಕ್ಕೆ ವ್ಯಕ್ತಿಯೊಬ್ಬ ಮನೆಗೆ ಬೆಂಕಿ ಹಚ್ಚಿದ ಘಟನೆ ವಿವೇಕ್ ನಗರದಲ್ಲಿ ನಡೆದಿದೆ. ಜು.1 ರಂದು ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಸುಬ್ರಮಣಿ ಬೆಂಕಿ ಹಚ್ಚಿದ ಆರೋಪಿ. ಈತನ ಸಹೋದರಿ ತನ್ನ ಮಗಳ ಮದುವೆಗಾಗಿ, ವೆಂಕಟರಮಣಿ ಎಂಬುವವರ ಬಳಿ 5 ಲಕ್ಷ ರೂ. ಹಣ ಪಡೆದಿದ್ದಳು. ಹಲವು ವರ್ಷಗಳಾದರೂ ಸಾಲ ವಾಪಸ್‌ ನೀಡಿರಲಿಲ್ಲ. ಇದರಿಂದ ವೆಂಕಟರಮಣಿ ಹಣ ವಾಪಸ್‌ ಕೊಡುವಂತೆ ಕೇಳಿದ್ದರು.

   ಹಣ ವಾಪಸ್‌ ಕೇಳಿದ್ದಕ್ಕೆ ಪಾರ್ವತಿ ಹಾಗೂ ಆಕೆಯ ಮಗಳು ವೆಂಕಟರಮಣಿಯವರ ಬಳಿ ಗಲಾಟೆ ಮಾಡಿದ್ದಾರೆ. ಇನ್ನು ಇದೇ ವಿಚಾರಕ್ಕೆ ಸಿಟ್ಟಾದ ಆರೋಪಿ, ವೆಂಕಟರಮಣಿ ಮನೆಗೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ್ದಾನೆ. ಅದೃಷ್ಟವಶಾತ್‌ ಮನೆಯಲ್ಲಿದ್ದವರು ಪಾರಾಗಿದ್ದಾರೆ. ಆರೋಪಿಯ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

  ಈ ಸಂಬಂಧ ವೆಂಕಟರಮಣಿ ಪುತ್ರ ವಿವೇಕ್‌ ನಗರ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ಆರೋಪಿ ವಿರುದ್ಧ ಎಫ್‌ಐಆರ್‌ ದಾಖಲಾಗಿದ್ದು, ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. 

Recent Articles

spot_img

Related Stories

Share via
Copy link