ಬೆಂಗಳೂರು
ಬೆಳಗಾವಿಯಲ್ಲಿ ಇದೇ 27 ರಂದು ಪ್ರಧಾನಿ ನರೇಂದ್ರ ಮೋದಿ ಕಿಸಾನ್ ಸಮ್ಮಾನ್ ನಿಧಿಯನ್ನು ರೈತರ ಖಾತೆಗೆ ನೇರ ವರ್ಗಾವಣೆ ಮಾಡಲಿದ್ದಾರೆ ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.
ಪ್ರಧಾನಿ ಕಾರ್ಯಕ್ರಮದ ಸಿದ್ಧತೆಗಳನ್ನು ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ಸಂಪೂರ್ಣ ರೈತರ ಕಾರ್ಯಕ್ರಮವಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ರೈತ ಮಹಿಳೆಯರು ಭಾಗವಹಿಸುವ ನಿರೀಕ್ಷೆಯಿದೆ ಎಂದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ