ಕೂಚ್‌ ಬೆಹಾರ್‌ ಟ್ರೋಫಿ : ಕರ್ನಾಟಕ ತಂಡವನ್ನು ಅಭಿನಂದಿಸಿದ ಸಿಎಂ

ಬೆಂಗಳೂರು: 

     ಇತ್ತೀಚಿಗೆ ಶಿವಮೊಗ್ಗದಲ್ಲಿ ನಡೆದ ಕೂಚ್ ಬೆಹಾರ್ ಟ್ರೋಫಿ ಕ್ರಿಕೆಟ್ ಪಂದ್ಯದಲ್ಲಿ 404 ರನ್ ಗಳಿಸಿ 19 ವರ್ಷದೊಳಗಿನ ಕರ್ನಾಟಕ ತಂಡ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಪ್ರತಿಭಾವಂತ ಆಟಗಾರ ಪ್ರಖರ್ ಚತುರ್ವೇದಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅಭಿನಂದಿಸಿದರು.

     ಮುಂಬೈ ವಿರುದ್ಧ ನಡೆದ 2024ರ ಕೂಚ್ ಬೆಹಾರ್ ಟ್ರೋಫಿ ಅಂಡರ್ 19 ಟೂರ್ನಿಯ ಫೈನಲ್ ಪಂದ್ಯದಲ್ಲಿ ಪ್ರಖರ್ ಚತುರ್ವೇದಿ  ಅಜೇಯ 404 ರನ್‍ಗಳನ್ನು ಗಳಿಸಿ, ಟೀಂ ಇಂಡಿಯಾ ಆಟಗಾರ ಯುವರಾಜ್ ಸಿಂಗ್ ಅವರ ದಾಖಲೆಯನ್ನು ಮುರಿದಿದ್ದರು.

    ಪಂದ್ಯ ನಡೆದ ಜನವರಿ 15 ರಂದು ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ಹಂಚಿಕೊಂಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, 79 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ  ಕೂಚ್‌ ಬಿಹಾರ್‌ ಟ್ರೋಫಿ ಗೆದ್ದ ಕರ್ನಾಟಕ ತಂಡಕ್ಕೆ ಅಭಿನಂದನೆ ಸಲ್ಲಿಸಿದ್ದರು. ಬುಧವಾರ ಕರ್ನಾಟಕ ತಂಡ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಪ್ರತಿಭಾವಂತ ಆಟಗಾರ ಪ್ರಖರ್ ಚತುರ್ವೇದಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅಭಿನಂದಿಸಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ