ಕೊಡಗು :
ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಜೈಲಿನಿಂದ ಸ್ಪರ್ಧಿಸಿದ ಅಭ್ಯರ್ಥಿ ಗೆಲುವು ಸಾಧಿಸಿ ಎಲ್ಲರೂ ನಿಬ್ಬೆರಗಾಗುವಂತೆ ಮಾಡಿದ್ದಾರೆ
ವಿರಾಜಪೇಟೆ ತಾಲೂಕಿನ ಎಮ್ಮೆಗುಂಡಿ ಕ್ಷೇತ್ರದ ಪುಲಿಯಂಡ ಬೋಪಣ್ಣ ಗೆಲುವು ಸಾಧಿಸಿರುವ ಬಿಜೆಪಿ ಬೆಂಬಲಿತ ಅಭ್ಯರ್ಥಿ. ಇವರು ಜಾತಿ ನಿಂದನೆ ಪ್ರಕರಣದಲ್ಲಿ ಇವರು ನ್ಯಾಯಾಂಗ ಬಂಧನದಲ್ಲಿದ್ದರು. ಖುದ್ದು ನಾಮಪತ್ರ ಸಲ್ಲಿಸಲು ಅವಕಾಶ ಆಗಿರಲಿಲ್ಲ. ತಮ್ಮ ಬೆಂಬಲಿಗರೊಬ್ಬರು ನಾಮಪತ್ರ ಸಲ್ಲಿಸಿದ್ದರು.
ಸತತ ನಾಲ್ಕನೇ ಬಾರಿಗೆ ಜಯಭೇರಿ ಸಾಧಿಸಿರುವ ಬೋಪಣ್ಣ ಕೊನೆ ಕ್ಷಣದಲ್ಲಿ ಪಾಲಿಬೆಟ್ಟ ಪಂಚಾಯಿತಿ ಎಮ್ಮೆಗುಂಡಿ ವಾರ್ಡ್‌ನಿಂದ ಸ್ಪರ್ಧಿಸಿ ಜೈಲಿನಿಂದ ಬಿಡುಗಡೆಯಾಗಿ ಪ್ರಚಾರ ನಡೆಸಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ