ಸ್ಫೋಟಕ ಭವಿಷ್ಯ ಹೇಳಿದ ಕೋಡಿ ಮಠದ ಶ್ರೀಗಳು….!

ಬೆಂಗಳೂರು:

   ರಾಜಕೀಯ ಭವಿಷ್ಯವಾಣಿಗೆ ಹೆಸರುವಾಸಿಯಾಗಿರುವ ಕೋಡಿಮಠ ಸಂಸ್ಥಾನದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ  ಅವರು ರಾಜ್ಯದ ಮುಖ್ಯಮಂತ್ರಿ  ಹುದ್ದೆಯ ಬಗ್ಗೆ ನೀಡಿದ ಅಚ್ಚರಿಯ ಹೇಳಿಕೆಯೊಂದು ಸದ್ಯ ಸುದ್ದಿಯಾಗುತ್ತಿದೆ. ಕಾಂಗ್ರೆಸ್‌ನ ನಾಯಕರೊಬ್ಬರನ್ನು ಹೆಸರಿಸಿರುವ ಅವರು, ಇವರಿಗೆ ಮುಖ್ಯಮಂತ್ರಿಯಾಗುವ ಯೋಗವಿದೆ ಎಂದಿದ್ದಾರೆ.

   ವಿಜಯಪುರ‌ ಜಿಲ್ಲೆಯ ಆಲಮೇಲ ತಾಲೂಕಿನ ಕಡನಿ ಗ್ರಾಮದಲ್ಲಿ ನಡೆದ ಸಾಮೂಹಿಕ ವಿವಾಹ ಕಾರ್ಯಕ್ರಮದ ಸಂದರ್ಭದಲ್ಲಿ ಈ ಬಗ್ಗೆ ಮಹತ್ವದ ಹೇಳಿಕೆ ನೀಡಿದ್ದಾರೆ. ಸದ್ಯ ರಾಜ್ಯದಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಬೆನ್ನಲ್ಲೇ ಈ ಹೇಳಿಕೆ ವೈರಲ್‌ ಆಗಿದೆ. ಅವರು ಆಡಿರುವುದು ಎಂ.ಬಿ ಪಾಟೀಲ್‌ ಬಗ್ಗೆ. ʼಎಂಬಿ ಪಾಟೀಲ್‌ ಅವರು ತುಂಬಾ ಒಳ್ಳೆಯ ಕೆಲಸಗಳನ್ನು ಮಾಡಿಕೊಂಡು ಬಂದಿದ್ದಾರೆ. ಅವರಿಗೆ ಮುಖ್ಯಮಂತ್ರಿ ಆಗುವ ಯೋಗ ಇದೆ. ಉತ್ತರ ಕರ್ನಾಟಕ ಭಾಗದಿಂದ ಎಂ.ಬಿ ಪಾಟೀಲ್ ಅವರು ಮುಖ್ಯಮಂತ್ರಿಯಾಗಲಿʼ ಎಂದು ಹೇಳಿದ್ದಾರೆ.

   ಕಳೆದ ತಿಂಗಳಷ್ಟೇ ಕೋಡಿಮಠ ಮಹಾಸಂಸ್ಥಾನದ ಪೀಠಾಧ್ಯಕ್ಷ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರು ರಾಜ್ಯ ರಾಜಕಾರಣದ ಸಂಬಂಧ ಸ್ಫೋಟಕ ಭವಿಷ್ಯ ನುಡಿದಿದ್ದರು. ರಾಜ್ಯ ಸರ್ಕಾರಕ್ಕೆ ಸದ್ಯಕ್ಕೆ ಯಾವುದೇ ತೊಂದರೆ ಇಲ್ಲ ಎಂದಿದ್ದರು. ಮತ್ತೊಂದು ಭವಿಷ್ಯ ನುಡಿದಿದ್ದ ಕೋಡಿಶ್ರೀ ಅವರು ಹಾಲು ಕೆಟ್ಟರೂ, ಹಾಲುಮತ ಸಮಾಜ ಕೆಡುವುದಿಲ್ಲ ಎಂಬ ಮಾತಿದೆ. ಅದರಂತೆ ಈಗ ಹಾಲುಮತ ಸಮಾಜದವರ ಕೈಯಲ್ಲೇ ರಾಜ್ಯದ ಚುಕ್ಕಾಣಿ ಇದೆ. ಹಾಗಾಗಿ ಅಧಿಕಾರವನ್ನು ಅವರಿಂದ ಬಿಡಿಸಿಕೊಳ್ಳುವುದು ಅಷ್ಟು ಸುಲಭದ ಮಾತಲ್ಲ, ಅವರಾಗಿಯೇ ಅಧಿಕಾರ ಬಿಡಬೇಕು ಎಂದು ಸಿದ್ದರಾಮಯ್ಯ ಅವರ ಕುರಿತು ಪರೋಕ್ಷವಾಗಿ ಹೇಳಿದ್ದರು.

Recent Articles

spot_img

Related Stories

Share via
Copy link