ಕೋಲಾರ್ ಇನ್ ಲಾಡ್ಜ್ ಮೇಲೆ ಪೊಲೀಸರ ದಿಢೀರ್ ದಾಳಿ: ವೇಶ್ಯಾವಾಟಿಕೆ ದಂದೆಯಲ್ಲಿದ್ದ 9 ಮಂದಿ ವಶ

 ಕೋಲಾರ: ನಗರದ ಮುಖ್ಯ ರಸ್ತೆಯೊಂದರಲ್ಲಿರುವ ಹೋಟೆಲ್ ಕೋಲಾರ್ ಇನ್ ಲಾಡ್ಜ್ನಲ್ಲಿ ಕಾನೂನುಬಾಹಿರವಾಗಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂದೆಯ ಜಾಲವನ್ನು ಭೇದಿಸುವಲ್ಲಿ ನಗರ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ.

ಸಾರ್ವಜನಿಕರಿಂದ ಬಂದ ಖಚಿತ ದೂರಿನ ಮೇರೆಗೆ ಜಾಗೃತರಾದ ಪೊಲೀಸರು, ಲಾಡ್ಜ್ ಮೇಲೆ ದಿಢೀರ್ ದಾಳಿ ನಡೆಸಿ ಐದು ಮಂದಿ ಮಹಿಳೆಯರು ಹಾಗೂ ನಾಲ್ಕು ಪುರುಷರನ್ನು ವಶಕ್ಕೆ ಪಡೆದಿದ್ದಾರೆ.

ಕೋಲಾರ ನಗರದಿಂದ ಮಾಲೂರಿಗೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಯಲ್ಲಿರುವ ಎಪಿಎಂಸಿ ಮಾರುಕಟ್ಟೆ ಸಮೀಪದ ಹೋಟೆಲ್‌ಕೋಲಾರ್ ಇನ್ ಲಾಡ್ಜ್ನಲ್ಲಿ ಈ ಅಕ್ರಮ ದಂದೆ ನಡೆಯುತ್ತಿತ್ತು ಎನ್ನಲಾಗಿದೆ.

ಕಳೆದ ಕೆಲವು ದಿನಗಳಿಂದ ಈ ಲಾಡ್ಜ್ನಲ್ಲಿ ಅಕ್ರಮ ಚಟುವಟಿಕೆಗಳು ಮತ್ತು ವೇಶ್ಯಾವಾಟಿಕೆ ದಂದೆ ಎಗ್ಗಿಲ್ಲದೆ ನಡೆಯುತ್ತಿದೆ ಎಂಬ ದೂರುಗಳು ಕೇಳಿಬಂದಿದ್ದವು. ಈ ಬಗ್ಗೆ ಸಾರ್ವಜನಿಕರು ನೀಡಿದ ಮಾಹಿತಿ ಆಧರಿಸಿ ಜಿಲ್ಲಾ ವರಿಷ್ಠಾಧಿಕಾರಿ ಕನ್ನಿಕಾ ಸಿಕ್ರಿವಾಲ್ ಅವರ ಮಾರ್ಗದರ್ಶನದಲ್ಲಿ ಕೋಲಾರ ನಗರ ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ತಂಡವು ಕಾರ್ಯಚರಣೆ ರೂಪಿಸಿ ಲಾಡ್ಜ್ ಮೇಲೆ ದಾಳಿ ನಡೆಸಿದೆ.

ದಾಳಿಯ ಸಂದರ್ಭದಲ್ಲಿ ಲಾಡ್ಜ್ನ ರೂಮ್‌ಗಳಲ್ಲಿ ಅನೈತಿಕ ಚಟುವಟಿಕೆಯಲ್ಲಿ ತೊಡಗಿದ್ದ ಐದು ಮಂದಿ ಮಹಿಳೆಯರು ಹಾಗೂ ದಂದೆಯಲ್ಲಿದ್ದ ನಾಲ್ಕು ಮಂದಿ ಪುರುಷರನ್ನು ಪೊಲೀಸರು ಸ್ಥಳದಲ್ಲೇ ವಶಕ್ಕೆ ಪಡೆದುಕೊಂಡಿದ್ದಾರೆ. ಸದ್ಯ ವಶಕ್ಕೆ ಪಡೆದವರನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ.

ಜನನಿಬಿಡ ರಸ್ತೆ ಹಾಗೂ ಮಾರುಕಟ್ಟೆಯ ಕೂಗಳತೆಯ ದೂರದಲ್ಲೇ ಇಂತಹ ದಂದೆ ನಡೆಯುತ್ತಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿತ್ತು.

ಈ ದಂದೆಯ ಹಿಂದೆ ಲಾಡ್ಜ್ ಮಾಲೀಕರ ಕೈವಾಡವಿದೆಯೇ ಅಥವಾ ಮ್ಯಾನೇಜರ್ ಶಾಮೀಲಾಗಿದ್ದಾರೆಯೇ ಎಂಬ ಬಗ್ಗೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಕೋಲಾರ ನಗರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ.

Recent Articles

spot_img

Related Stories

Share via
Copy link