ಲವ್ ಜಿಹಾದ್ ಪ್ರಕರಣ : ಮುಸ್ತಫಾ ಮೊಬೈಲ್‌ನಲ್ಲಿ ಯುವತಿಯರ ಅಶ್ಲೀಲ ವಿಡಿಯೋಗಳು ಪತ್ತೆ!

ಕೊಪ್ಪಳ: ರಾಜ್ಯದಲ್ಲಿ ಲವ್ ಜಿಹಾದ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಹುಬ್ಬಳ್ಳಿಯಲ್ಲಿ ಎರಡೆರಡು ಲವ್ ಜಿಹಾದ್ ಪ್ರಕರಣಗಳು ವರದಿಯಾಗಿದ್ದು ಇದೀಗ ಕೊಪ್ಪಳದಲ್ಲೂ ಲವ್ ಜಿಹಾದ್ ಆರೋಪ ಕೇಳಿಬಂದಿದೆ. ಮುಸ್ಲಿಂ ಯುವಕ ಮುಸ್ತಫಾ ಹಿಂದೂ ನರ್ಸಿಂಗ್ ವಿದ್ಯಾರ್ಥಿನಿಯರನ್ನು ಪುಸಲಾಯಿಸಿ, ಅವರ ಸ್ನೇಹ ಸಂಪಾದಿಸಿ ನಂತರ ಲೈಂಗಿಕ ಕ್ರಿಯೆ ನಡೆಸಿದ್ದು ಅದನ್ನು ವಿಡಿಯೋ ಮಾಡಿಟ್ಟುಕೊಂಡಿದ್ದಾನೆ.

ಕುಷ್ಟಗಿ ಗ್ರಾಮದ ಹಿಂದೂ ವಿದ್ಯಾರ್ಥಿನಿಯೊಬ್ಬಳು ಕೊಪ್ಪಳದಲ್ಲಿ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದು ಆಕೆಯನ್ನು ಮುಸ್ತಫಾ ಪುಸಲಾಯಿಸಿದ್ದನು. ಆಕೆ ಜೊತೆಗಿದ್ದಾಗ ಮುಸ್ತಫಾ ಹಿಂದೂ ಯುವಕರ ಕೈಗೆ ಸಿಕ್ಕಿಬಿದ್ದಿದ್ದಾನೆ. ಈ ವೇಳೆ ಆತನ ಮೊಬೈಲ್ ಪರಿಶೀಲಿಸಿದಾಗ ಹಲವು ಹಿಂದೂ ಯುವತಿಯರ ಜೊತೆಗಿನ ಹಲವು ಅಶ್ಲೀಲ ವಿಡಿಯೋಗಳು ಪತ್ತೆಯಾಗಿವೆ. ಇದೀಗ ಲವ್ ಜಿಹಾದ್ ಆರೋಪ ಕೇಳಿಬಂದಿದೆ. ಮುಸ್ತಫಾ ವಿರುದ್ಧ ಕ್ರಮಕೈಗೊಳ್ಳುವಂತೆ ಹಿಂದೂ ಯುವಕರು ಆಗ್ರಹಿಸಿದ್ದಾರೆ. ವಿಶ್ವ ಹಿಂದೂ ಪರಿಷತ್​ನ ಜಿಲ್ಲಾಧ್ಯಕ್ಷ ಡಾ. ಸಂಗಮೇಶ್ ಹಿರೇಮಠ ಸೇರಿದಂತೆ ಹಿಂದೂ ಕಾರ್ಯಕರ್ತರು ಮುಸ್ತಫಾ ವಿರುದ್ಧ ಎಸ್​ಪಿಗೆ ದೂರು ನೀಡಿದ್ದಾರೆ.

Recent Articles

spot_img

Related Stories

Share via
Copy link