ಕೊರಟಗೆರೆ :
ಗ್ರಾಮ ಪಂಚಾಯಿತಿ ಚುನಾವಣೆ ಸಮೀಪಿಸುತ್ತಿದ್ದು, ಗ್ರಾಮಗಳಲ್ಲಿ ಸಾರ್ವಜನಿಕರು ಶಾಂತಿಯುತ ಚುನಾವಣೆ ನಡೆಸುವ ಮೂಲಕ ಯಾವುದೇ ಅಹಿತಕರ ಘಟನೆ ನಡೆಯದಂತೆ ಮತದಾನವನ್ನು ಮಾಡುವಂತೆ ಕೊರಟಗೆರೆ ಪೋಲೀಸ್ ಠಾಣೆಯ ಎ.ಎಸ್.ಐ ಯೋಗೇಶ್ ಸಾರ್ವಜನಿಕರಲ್ಲಿ ಅರಿವು ಮೂಡಿಸಿದರು.
ತಾಲ್ಲೂಕಿನ ಹೊಳವನಹಳ್ಳಿ ಹೋಬಳಿಯ ಅಕ್ಕಿರಾಂಪುರ, ಸೋಂಪುರ, ಹೊಳವನಹಳ್ಳಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಿಗೆ ಭೇಟಿ ನೀಡಿ, ಗ್ರಾಮ ಪಂಚಾಯಿತಿ ಚುನಾವಣೆ ಇದೇ ತಿಂಗಳ 22ರಂದು ನಡೆಯಯುವಂತೆ ಘೋಷಣೆಯಾಗಿದೆ.
ಸಾರ್ವಜನಿಕರು ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಪ್ರತಿಯೊಬ್ಬ ಮತದಾರರು ಶಾಂತಿಯುತವಾಗಿ ಮತದಾನವನ್ನು ಮಾಡಬೇಕು ಎಂದು ಮನವಿ ಮಾಡಿದರು. ಇದೇ ಸಂದರ್ಭದಲ್ಲಿ ಸಿಬ್ಬಂದಿಯಾದ ದೊಡ್ಡಲಿಂಗಯ್ಯ, ಅಕ್ರಂಪಾಷ್ ಸೇರಿದಂತೆ ಸಾರ್ವಜನಿಕರು ಇದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ