ಕೊರಟಗೆರೆ :
ಶ್ರೀ ರೇವಣ್ಣ ಸಿದ್ದೇಶ್ವರ ಕನಕ ಗುರುಪೀಠ ಹೊಸದುರ್ಗ ಮಠದ ಶ್ರೀ ಈಶ್ವರಾನಂದಪುರಿ ಮಹಾಸ್ವಾಮಿಗಳ ಹುಟ್ಟು ಹಬ್ಬದ ಪ್ರಯುಕ್ತ ಸಮಾಜದ ಬಂಧುಗಳು ಕೊರಟಗೆರೆ ತಾಲ್ಲೂಕಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳು ಹಾಗೂ ಸಿಬ್ಬಂದಿ ವರ್ಗಕ್ಕೆ ಹಾಲು, ಹಣ್ಣು ಮತ್ತು ಬ್ರೆಡ್ ವಿತರಿಸಿದರು.
ಕೊರಟಗೆರೆ ತಾಲ್ಲೂಕಿನ ಶ್ರೀ ರೇವಣಸಿದ್ದೇಶ್ವರ ಕನಕ ಗುರುಪೀಠ ಸಿದ್ದರಬೆಟ್ಟದ ಮಠದಲ್ಲಿ ಪೂಜೆ ಪುರÀಸ್ಕಾರಗಳನ್ನು ನೆರವೇರಿಸಿದ ಬಳಿಕ, ಸಮಾಜದ ಬಂಧುಗಳು ಪಟ್ಟಣದ ಕನಕ ವೃತ್ತದ ಪ್ರತಿಮೆಗೆ ಪೂಜೆ ಸಲ್ಲಿಸಿ ನಂತರ ಆಸ್ಪತ್ರೆಗಳಲ್ಲಿ ರೋಗಿಗಳು ಹಾಗೂ ಸಿಬ್ಬಂದಿ ವರ್ಗಕ್ಕೆ ಹಾಲು, ಹಣ್ಣು ಹಾಗೂ ಬ್ರೆಡ್ ವಿತರಿಸಿ ಸ್ವಾಮೀಜಿಯ ಹುಟ್ಟುಹಬ್ಬವನ್ನು ಸರಳವಾಗಿ ಆಚರಿಸಿದರು.
ಈ ಸಂದರ್ಭದಲ್ಲಿ ತಾಲ್ಲೂಕು ಕುರುಬ ಸಂಘದ ಅಧ್ಯಕ್ಷ ಮೈಲಾರಪ್ಪ ಮಾತನಾಡಿ, ತಾಲ್ಲೂಕಿನಲ್ಲಿ ಹೆಚ್ಚು ಸಂಘಟಕರಾಗಲು ತಾಲ್ಲೂಕಿನಲ್ಲಿ ಸ್ಥಾಪನೆಗೊಂಡ ಶ್ರೀ ರೇವಣಸಿದ್ದೇಶ್ವರ ಕನಕಗುರು ಪೀಠವು ಪ್ರಮುಖ ಪಾತ್ರ ವಹಿಸುತ್ತಿದೆ. ಜಿಲ್ಲೆಯಲ್ಲಿ ಸಮುದಾಯಕ್ಕೆ ಸಾಮಾಜಿಕ, ಶೈಕ್ಷಣಿಕ, ಧಾರ್ಮಿಕ ಹಾಗೂ ರಾಜಕೀಯ ಶಕ್ತಿಯನ್ನು ನೀಡುವಲ್ಲಿ ಅದ್ವಿತೀಯ ಪಾತ್ರ ವಹಿಸುತ್ತಿದೆ ಎಂದರು.
ಜಿಲ್ಲಾ ಕಾಳಿದಾಸ ವಿದ್ಯಾವರ್ಧಕ ಸಂಘದ ತಾಲ್ಲೂಕು ನಿರ್ದೇಶಕ ಜಿ.ಡಿ. ನಾಗಭೂಷಣ್ ಮಾತನಾಡಿ, ತಾಲ್ಲೂಕಿಗೆ ಶ್ರೀಮಠ ಹಾಗೂ ಶ್ರೀ ಈಶ್ವರಾನಂದ ಪುರಿ ಮಹಾಸ್ವಾಮೀಜಿ ಆಗಮಿಸಿರುವುದು ನಮ್ಮೆಲ್ಲರ ಪುಣ್ಯ. ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗೆ ಕೊರಟಗೆರೆ ತಾಲ್ಲೂಕಿನ ಶ್ರೀಮಠ ಧಾರ್ಮಿಕ ಕೇಂದ್ರವಾಗಿದ್ದು, ಮುಂದಿನ ದಿನಗಳಲ್ಲಿ ಸಾಮಾಜಿಕ, ಶೈಕ್ಷಣಿಕ ಶಕ್ತಿಯನ್ನು ಸಮುದಾಯಕ್ಕೆ ದೊಡ್ಡ ಶಕ್ತಿ ನೀಡಲಿದೆ ಎಂದರು.
ಈ ಸಂದರ್ಭದಲ್ಲಿ ಡಾ. ಪ್ರಕಾಶ್, ನಾಗಭೂಷಣ್, ಪತ್ರಕರ್ತ ರಂಗಧಾಮಯ್ಯ, ಲಕ್ಷ್ಮೀಕಾಂತ್, ಕರಿಯಣ್ಣ, ರಂಗಶಾಮಯ್ಯ, ತಾಲ್ಲೂಕಿನ ಸಮಾಜದ ಮುಖಂಡರುಗಳಾದ ಶಿವಣ್ಣ, ರಂಗರಾಜು, ಆನಂದ್, ಗೋವಿಂದರಾಜು, ಮಹೇಶ್, ರಂಗನಾಥ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ