ಕೊರಟಗೆರೆ : 70 ಸಾವಿರ ಮೌಲ್ಯದ 600 ಗ್ರಾಂ ಗಾಂಜಾ ವಶ!!

ಕೊರಟಗೆರೆ :

      ತುಂಬಾಡಿ ಟೋಲ್‍ಪ್ಲಾಜಾ ಸಮೀಪದ ಪೆಟ್ಟಿಗೆ ಅಂಗಡಿ ಮುಂಭಾಗ ನಿಂತಿದ್ದ ದ್ವಿಚಕ್ರ ವಾಹನದ ಮೇಲೆ ಕೊರಟಗೆರೆ ಅಬಕಾರಿ ನಿರೀಕ್ಷಕಿ ಶ್ರೀಲತಾ ನೇತೃತ್ವದ ಅಬಕಾರಿ ಪೊಲೀಸರ ತಂಡ ದಾಳಿ ನಡೆಸಿ, ಇಬ್ಬರು ಆರೋಪಿಗಳಿಂದ 70 ಸಾವಿರ ರೂ. ಮೌಲ್ಯದ 600 ಗ್ರಾಂ ಗಾಂಜಾವನ್ನು ವಶಕ್ಕೆ ಪಡೆದಿರುವ ಘಟನೆ ಬುಧವಾರ ನಡೆದಿದೆ.

      ತಾಲ್ಲೂಕು ಕಸಬಾ ಹೋಬಳಿ ತುಂಬಾಡಿ ಗ್ರಾಪಂ ವ್ಯಾಪ್ತಿಯ ದಾಸರಹಳ್ಳಿ ಸಮೀಪದ ಟೋಲ್‍ಪ್ಲಾಜಾದ ಬಸ್ ನಿಲ್ದಾಣದಲ್ಲಿ ಇರುವ ಪೆಟ್ಟಿಗೆ ಅಂಗಡಿ ಮುಂಭಾಗ ನಿಂತಿದ್ದ ದ್ವಿಚಕ್ರ ವಾಹನವನ್ನು ಜಫ್ತಿ ಮಾಡಿದಾಗ ಸುಮಾರು 70 ಸಾವಿರ ರೂ. ಮೌಲ್ಯದ 600 ಗ್ರಾಂನಷ್ಟು ಗಾಂಜಾ ಸೊಪ್ಪು, ಹೂವು, ಬೀಜ ಹಾಗೂ ತೆನೆ ಮಿಶ್ರಿತ ಒಣ ಗಾಂಜಾ ಗಿಡಗಳನ್ನು ವಶಕ್ಕೆ ಪಡೆದಿದ್ದಾರೆ.

      ಅಕ್ರಮವಾಗಿ ಸಾಗಾಣಿಕೆ ಮಾಡುತ್ತಿದ್ದ ಮಧುಗಿರಿ ತಾಲ್ಲೂಕು ಕಾಟಗಾನಹಟ್ಟಿಯ ಶಿವಣ್ಣ ಮತ್ತು ಕೊರಟಗೆರೆ ತಾಲ್ಲೂಕು ವೀರನಗರ ವಾಸಿಯಾದ ಯಲ್ಲಪ್ಪ ಬಂಧಿತ ಆರೋಪಿಗಳಾಗಿದ್ದಾರೆ. ಇವರ ಮೇಲೆ ಬಂಧಿಸಿ ಎನ್‍ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲು ಮಾಡಲಾಗಿದೆ. ದಾಳಿಯ ವೇಳೆ ಅಬಕಾರಿ ನಿರೀಕ್ಷಕಿ ಶ್ರೀಲತಾ, ಉಪ ನಿರೀಕ್ಷಕಿ ವೈಷ್ಣವಿ ಕುಲಕರ್ಣಿ, ಸಿಬ್ಬಂದಿಗಳಾದ ದಾದಾಪೀರ್, ರಂಗಧಾಮಯ್ಯ, ಮಲ್ಲಿಕಾರ್ಜುನ್, ಮಂಜುಳ, ಮಧು ಉಪಸ್ಥಿತರಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link