ಕೊರಟಗೆರೆ :
ಬೈಕ್‍ಗಳ ಮುಖಾಮುಖಿ ಡಿಕ್ಕಿಯಿಂದ ಓರ್ವ ಸವಾರ ಸ್ಥಳದಲ್ಲೇ ಸಾವನ್ನಪ್ಪಿ, ಮತ್ತೋರ್ವನ ಸ್ಥಿತಿ ಗಂಭೀರವಾಗಿರುವ ಘಟನೆ ಕೊರಟಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ.
ಕೊರಟಗೆರೆ ತಾಲ್ಲೂಕಿನ ತುಂಬಾಡಿ ಬಳಿಯ ಟೋಲ್ ಪ್ಲಾಜಾ ಬಳಿ ಈ ದುರ್ಘಟನೆ ಜರುಗಿದ್ದು, ಕೊರಟಗೆರೆ ಕಡೆಯಿಂದ ಒಬ್ಬರು ಮಧುಗಿರಿ ಕಡೆಯಿಂದ ಮತ್ತೊಬ್ಬರು ಬೈಕ್‍ನಲ್ಲಿ ಬರುವಾಗ ಮುಖಾಮುಖಿ ಡಿಕ್ಕಿಯಾಗಿ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.
ತಾಲ್ಲೂಕಿನ ದಾಸರಹಳ್ಳಿ ಗ್ರಾಮದ ನಾರಾಯಣಪ್ಪ ಘಟನೆಯಲ್ಲಿ ಸ್ಥಳದಲ್ಲಿಯೇ ಸಾವಿಗೀಡಾದರೆ, ಕೋರಾ ಹೋಬಳಿಯ ಗೊಲ್ಲರಟ್ಟಿಯ ರಮೇಶ್‍ಗೆ ತೀವ್ರ ಪೆಟ್ಟಾಗಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಸಂಬಂಧ ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಸಿಪಿಐ ಸಿದ್ದರಾಮೇಶ್ವರ ಹಾಗೂ ಪಿಎಸ್‍ಐ ನಾಗರಾಜು ಭೇಟಿ ನೀಡಿ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
