ಉಡುಪಿ:
ಆಡಳಿತದಲ್ಲಿ ಹಿಡಿತ ಇಲ್ಲದ ಪರಿಸ್ಥಿತಿ ರಾಜ್ಯದಲ್ಲಿ ನಿರ್ಮಾಣವಾಗಿದೆ. ಧಂಗೆ ಏಳಿಸುತ್ತೇನೆ ಎಂದು ಹೇಳಿಕೆ ನೀಡುವ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಸಿಎಂ ಕುರ್ಚಿಯಲ್ಲಿ ಕುಳಿತುಕೊಳ್ಳಲು ಅರ್ಹರಲ್ಲ ಎಂದು ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ್ ಪೂಜಾರಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಉಡುಪಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯವೇ ಕಂಡು ಕೇಳರಿಯದ ದಬ್ಬಾಳಿಕೆ ಗುರುವಾರ ನಡೆದಿದೆ. ಕಾಂಗ್ರೆಸ್ ಕಾರ್ಯಕರ್ತರು ಬಿಎಸ್ ವೈ ಮನೆಗೆ ಮುತ್ತಿಗೆ ಹಾಕಿದ್ದಾರೆ ಇದು ಸಮ್ಮಿಶ್ರ ಸರ್ಕಾರದ ಗೂಂಡಾಗಿರಿತನ ಎಂದು ಆರೋಪಿಸಿದ್ದಾರೆ.
ಆಳುವ ಪಕ್ಷದ ಆಣತಿಯಂತೆ ಎಲ್ಲವೂ ನಡೆದಿದೆ. ಸಿಎಂ ಭಯೋತ್ಪಾದಕನ ರೀತಿ ಹೇಳಿಕೆ ಕೊಡುತ್ತಾರೆ. ಅವರ ಮಾದರಿಯಲ್ಲೇ ದಂಗೆ ಏಳುವುದಾಗಿ ಕರೆ ಕೊಟ್ಟಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ