ಗಾಂಧಿನಗರ : ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಮಾಲೂರು ಕೃಷ್ಣಯ್ಯ ಶೆಟ್ಟಿ

ಬೆಂಗಳೂರು

      ಮಾಜಿ ಸಚಿವ ಹಾಗೂ ಬಿಜೆಪಿ ಹಿರಿಯ ಮುಖಂಡ ಮಾಲೂರು ಕೃಷ್ಣಯ್ಯ ಶೆಟ್ಟಿ ಅವರು ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಗಾಂಧಿ ನಗರದ ವಿಧಾನಸಭಾ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಸಿದ್ದಾರೆ. ಗಾಂಧಿನಗರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸಪ್ತಗಿರಿ ಗೌಡ ಅವರ ವಿರುದ್ಧ ಬಂಡಾಯವಾಗಿ ಸ್ಪರ್ಧಿಸಿದ್ದು, ಇಂದು ಗಾಂಧಿನಗರದ ಬಿಬಿಎಂಪಿ ಕಚೇರಿಯಲ್ಲಿ ಉಮೇದುವಾರಿಕೆ ಸಲ್ಲಿಸಿದರು. 

     ಬಳಿಕ ಮಾತನಾಡಿದ ಕೃಷ್ಣಯ್ಯ ಶೆಟ್ಟಿ, ಕೊನೆ ಕ್ಷಣದವರೆಗೆ ತಮಗೆ ಟಿಕೆಟ್ ದೊರೆಯುವ ಭರವಸೆ ಇತ್ತು. ಪಕ್ಷ ನಡೆಸಿದ ಸಮೀಕ್ಷೆಯಲ್ಲಿ ತಮಗೆ ಹೆಚ್ಚಿನ ಮತಗಳು ಬಂದಿದ್ದು, ಕಾರ್ಯಕರ್ತರ ಒಲವು ಶೇ 61 ರಷ್ಟಿತ್ತು. ಆದರೆ ಕಾರ್ಯಕರ್ತರು ಸ್ಪರ್ಧಿಸುವಂತೆ ಒತ್ತಡ ಹೇರಿದ್ದು, ಅವರ ಒತ್ತಾಸೆಯಿಂದ ಕಣಕ್ಕಿಳಿದಿದ್ದೇನೆ. ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸವಿದೆ. ತಾವು ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತರಾಗಿದ್ದು, ಆದರೆ ಯಾವುದೇ ಕಾರಣಕ್ಕೂ ಪಕ್ಷ ತೊರೆಯುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap