ಮಂಡ್ಯ:
ಕಳೆದ ಎರಡು ದಿನಗಳಿಂದ ಕಾವೇರಿ ಜಲಾನಯನ ಪ್ರದೇಶದಲ್ಲಿ ಮುಂಗಾರು ಚುರುಕು ಪಡೆದುಕೊಂಡಿದ್ದು, ಕೆಆರ್‌ಎಸ್ ಡ್ಯಾಂ ಒಳಹರಿವಿನಲ್ಲಿ ಹೆಚ್ಚಳವಾಗಿದೆ. ರಾಜ್ಯದ ಹಲವೆಡೆ ಮಳೆಯ ಆರ್ಭಟ ಜೋರಾಗಿದೆ.
ಕೆಆರ್‌ಎಸ್ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬಂದಿದೆ. ನಿರಂತರ ಮಳೆ ಹಿನ್ನೆಲೆಯಲ್ಲಿ ಒಳ ಹರಿವಿನಲ್ಲಿ ಹೆಚ್ಚಳವಾಗಿದೆ. ಒಂದೇ ದಿನದಲ್ಲಿ 1,615 ಕ್ಯೂಸೆಕ್ ಒಳಹರಿವು ಹೆಚ್ಚಳವಾಗಿದ್ದು, ನಿನ್ನೆ ಕೆಆರ್‌ಎಸ್ ಡ್ಯಾಂಗೆ 2,241 ಕ್ಯೂಸೆಕ್ ಒಳಹರಿವು ಬಂದಿತ್ತು. ಇಂದು ಕೆಆರ್‌ಎಸ್‌ಗೆ 3,856 ಕ್ಯೂಸೆಕ್ ನೀರು ಒಳಹರಿವು ಬಂದಿದೆ. ಒಳಹರಿವು ಹೆಚ್ಚಳ ಹಿನ್ನೆಲೆ ನೀರಿನ ಮಟ್ಟದಲ್ಲೂ ಹೆಚ್ಚಳವಾಗಿದೆ.
124.80 ಅಡಿ ಗರಿಷ್ಠ ಮಟ್ಟದ ಕೆಆರ್‌ಎಸ್ ಡ್ಯಾಂ 88.40 ಅಡಿ ಭರ್ತಿಯಾಗಿದೆ. 49.452 ಟಿಎಂಸಿ ಗರಿಷ್ಠ ಸಾಂದ್ರತೆ ಡ್ಯಾಂನಲ್ಲಿ 15.007 ಟಿಎಂಸಿ ನೀರು ಸಂಗ್ರಹವಾಗಿದ್ದು, ಡ್ಯಾಂನ ಹೊರ ಹರಿವು 472 ಕ್ಯೂಸೆಕ್ ಆಗಿದೆ.