ನಾಳೆ ನಡೆಯಬೇಕಿದ್ದ `ಕೆ-ಸೆಟ್’ ಪರೀಕ್ಷೆ ಮುಂದೂಡಿಕೆ!!

ಮೈಸೂರು : 

      ನಾಳೆ (ಏ.11 ) ನಡೆಯಬೇಕಿದ್ದ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆ-ಸೆಟ್‌)ಯನ್ನು ಮುಂದೂಡಲಾಗಿದೆ.

      6 ನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಸಾರಿಗೆ ನೌಕರರು ಬಸ್ ಸಂಚಾರ ಬಂದ್ ಮಾಡಿ ಮುಷ್ಕರ ನಡೆಸುತ್ತಿರುವ ಹಿನ್ನೆಲೆಯಲ್ಲಿ ಪರೀಕ್ಷೆ ಮುಂದೂಡಲಾಗಿದೆ.

      ಏಪ್ರಿಲ್ 11 ರ ಭಾನುವಾರ ಕೆ-ಸೆಟ್ ಪರೀಕ್ಷೆ ನಡೆಸಲು ದಿನಾಂಕ ಪ್ರಕಟಿಸಲಾಗಿತ್ತು. ಆದರೆ ಸಾರಿಗೆ ನೌಕರರ ಮುಷ್ಕರ ಹಾಗೂ ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕೆ-ಸೆಟ್ ಪರೀಕ್ಷೆಯನ್ನು ಮುಂದೂಡಲಾಗಿದೆ. ಮುಂದಿನ ಪರೀಕ್ಷಾ ದಿನಾಂಕವನ್ನು ಶೀಘ್ರದಲ್ಲೇ ತಿಳಿಸಲಾಗುವುದು ಎಂದು ಮೈಸೂರು ವಿವಿ ಕುಲಪತಿ ಪ್ರೋ. ಹೇಮಂತ್ ಕುಮಾರ್ ತಿಳಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link