ಬೆಂಗಳೂರು :
ಶಾಲಾ ಕಾಲೇಜುಗಳ ಪುನರಾರಂಭದ ಹಿನ್ನಲೆಯಲ್ಲಿ ಸಾರಿಗೆ ನಿಗಮದ ಬಸ್ಸುಗಳಲ್ಲಿ ಸಂಚರಿಸುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣ ವನ್ನು ಸಾರಿಗೆ ಇಲಾಖೆ ವಿಸ್ತರಿಸಿದೆ.
2019-20 ನೇ ಸಾಲಿನ ಪಾಸಿನ ಆಧಾರದಲ್ಲಿ ಉಚಿತವಾಗಿ ಪ್ರಯಾಣಿಸಲು ಫೆ.28 ರವರೆಗೆ ಅವಕಾಶ ಕಲ್ಪಿಸಲಾಗಿತ್ತು. ಇದೀಗ ಪಾಸುಗಳನ್ನು ಪಡೆಯಲು ವಿದ್ಯಾರ್ಥಿಗಳಿಗೆ ಮತ್ತಷ್ಟು ಕಾಲಾವಕಾಶ ನೀಡುವ ಸಲುವಾಗಿ ಎಲ್ಲಾ ವರ್ಗದ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಕಳೆದ ವರ್ಷದ ಬಸ್ ಪಾಸ್ ನೊಂದಿಗೆ ಪ್ರಸ್ತುತ ಸಾಲಿನಲ್ಲಿ ಶಾಲಾ ಕಾಲೇಜುಗಳಿಗೆ ಶುಲ್ಕ ಪಾವತಿ ರಸೀದಿ ತೋರಿಸಿ ಮಾರ್ಚ್ 31 ರವರೆಗೆ ಸಾರಿಗೆ ನಿಗಮದ ಬಸ್ಸುಗಳಲ್ಲಿ ತೆರಳು ಅವಕಾಶ ವಿಸ್ತರಿಸಲಾಗಿದೆ ಎಂದು ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಸ್ಪಷ್ಟಪಡಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
