‘ತಕ್ಷಣ ಬಸ್ ಸೇವೆ ಆರಂಭಿಸಿ’ ; ಸಾರಿಗೆ ನೌಕರರಿಗೆ ಹೈಕೋರ್ಟ್ ನೋಟಿಸ್!!

ಬೆಂಗಳೂರು : 

      ಕೊರೊನಾ ನಡುವೆ ಸಾರಿಗೆ ನೌಕರರ ಮುಷ್ಕರ ಸರ್ಕಾರಕ್ಕೆ ತಲೆ ನೋವಾಗಿ ಪರಿಣಮಿಸಿದ್ದ ಹಿನ್ನೆಲೆ ಸಾರಿಗೆ ನೌಕರರ ಸಂಘಕ್ಕೆ ಹೈಕೋರ್ಟ್ ನೋಟಿಸ್ ನೀಡಿದ್ದು, ಕೂಡಲೇ ಸಾರಿಗೆ ಸಂಚಾರ ಆರಂಭಿಸುವಂತೆ ಆದೇಶ ನೀಡಿದೆ.

     ರಾಜ್ಯದಲ್ಲಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ನಡೆಸುತ್ತಿರುವಂತ ಮುಷ್ಕರ ಇಂದಿಗೆ 14ನೇ ದಿನಕ್ಕೆ ಕಾಲಿಟ್ಟಿದೆ.

     ಈ ಕುರಿತಂತೆ ಇಂದು ರಾಜ್ಯ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಎಸ್ ಎ ಓಕಾ ಹಾಗೂ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ವಿಭಾಗೀಯ ಪೀಠವು, ರಾಜ್ಯದಲ್ಲಿ ಸಾರಿಗೆ ಬಸ್ ಸಂಚಾರ ವ್ಯತ್ಯಯದಿಂದಾಗಿ ಜನಸಾಮಾನ್ಯರಿಗೆ ತೊಂದರೆ ಉಂಟಾಗಿದೆ. ಈಗ ಶೇ.44ರಷ್ಟು ಬಸ್ ಸಂಚಾರ ಮಾತ್ರವೇ ಇದೆ. ಕೋವಿಡ್ ನ ಸಂಕಷ್ಟದಿಂದಾಗಿ ಜನರು ತತ್ತರಿಸಿದ್ದಾರೆ. ಲಸಿಕಾ ಕೇಂದ್ರಕ್ಕೆ ಜನರು ಹೋಗೋದಕ್ಕೂ ಕಷ್ಟ ಆಗಿದೆ. ಆಸ್ಪತ್ರೆಗೆ ಹೋಗೋದಕ್ಕೆ ಬಸ್ ಸಂಚಾರ ಇಲ್ಲದೇ ಕಷ್ಟ ಪಡುವಂತಾಗಿದೆ ಎಂದು ಅಭಿಪ್ರಾಯ ಪಟ್ಟಿದೆ.

      ಇನ್ನೂ ಮುಂದುವರೆದು, ಕೋವಿಡ್ ಸಂಕಷ್ಟದ ಪರಿಸ್ಥಿತಿಯಲ್ಲಿ ಮುಷ್ಕರ ನಡೆಸುವುದು ಸರಿಯಲ್ಲ. ಬಸ್ ಇಲ್ಲದೇ ಲಸಿಕಾ ಕೇಂದ್ರಗಳಿಗೆ ಜನರು ಲಸಿಕೆ ಹಾಕಿಸಿಕೊಳ್ಳೋದಕ್ಕೆ ತೆರಳಲು ಕಷ್ಟ ಆಗಿದೆ. ಸಾರಿಗೆ ಸಂಚಾರ ವ್ಯವಸ್ಥೆ ಜನರ ಮೂಲಭೂತ ಹಕ್ಕಾಗಿದೆ. ಸಾರಿಗೆ ಸಂಚಾರದಲ್ಲಿ ವ್ಯತ್ಯಯ ಉಂಟಾಗಿರೋದ್ರಿಂದ ಜನರ ಮೂಲ ಭೂತ ಹಕ್ಕಿಗೆ ಧಕ್ಕೆಯಾಗಲಿದೆ. ಹೀಗಾಗಿ ನಿಮ್ಮ ಬೇಡಿಕೆಯನ್ನು ಕಾಯ್ದಿರಿಸಿ, ಕೂಡಲೇ ಸಾರಿಗೆ ಸಂಚಾರ ಆರಂಭಿಸುವಂತೆ ಮುಷ್ಕರ ನಿರತ ಸಾರಿಗೆ ನೌಕರರ ಕೂಟಕ್ಕೆ ಹೈಕೋರ್ಟ್ ನೋಟಿಸ್ ನಲ್ಲಿ ತಿಳಿಸಿದೆ.

     ಈ ಕುರಿತಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮಾಹಿತಿ ನೀಡಿದ್ದು, ಸಾರಿಗೆ ನೌಕರರ ಮುಷ್ಕರದ ನಡುವೆಯೂ ರಾಜ್ಯಾಧ್ಯಂತ 4 ಗಂಟೆಯ ವೇಳೆಗೆ KSRTC 3048 ಬಸ್, BMTC 1502 ಬಸ್, NEKRTC 1248 ಬಸ್, NWKRTC 1479 ಬಸ್ ಸೇರಿದಂತೆ ಒಟ್ಟು 7,277 ಸಾರಿಗೆ ಬಸ್ ಸಂಚಾರ ಆರಂಭಿಸಿರುವುದಾಗಿ ತಿಳಿಸಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap