ಮೈಸೂರು:
ತಮಿಳುನಾಡಿನ ಖಾಸಗಿ ಬಸ್ ಮತ್ತು ಕೆಎಸ್‌ಆರ್‌ಟಿಸಿ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸುಮಾರು 20 ಪ್ರಯಾಣಿಕರು ಗಾಯಗೊಂಡ ಘಟನೆ ಮೈಸೂರಿನ ಮಣಿಪಾಲ್ ಆಸ್ಪತ್ರೆ ಜಂಕ್ಷನ್‌ನಲ್ಲಿ ಶುಕ್ರವಾರ ನಡೆದಿದೆ.
ಜಂಕ್ಷನ್‌ನಲ್ಲಿ ಸಿಇಎಸ್‌ಸಿ ವತಿಯಿಂದ ದಸರಾ ಸ್ವಾಗತ ದೀಪಾಲಂಕಾರಕ್ಕೆ ನಿರ್ಮಿಸಲಾಗಿದ್ದ ಕಬ್ಬಿಣದ ಕಂಬಕ್ಕೆ ಬಸ್‌ನೊಂದು ಡಿಕ್ಕಿ ಹೊಡೆದು ನಂತರ ಎದುರಿನಿಂದ ಬರುತ್ತಿದ್ದ ಬಸ್‌ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಣಿಪಾಲ ಆಸ್ಪತ್ರೆಯಲ್ಲಿ ಹೊರರೋಗಿಗಳಾಗಿ ಚಿಕಿತ್ಸೆ ಪಡೆದು ಕೂಡಲೇ ಡಿಸ್ಚಾರ್ಜ್ ಆಗಿದ್ದಾರೆ. ಈ ಸಂಬಂಧ ಎನ್‌ಆರ್ ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಎರಡೂ ಬಸ್‌ಗಳನ್ನು ವಶಕ್ಕೆ ಪಡೆದಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ