ಬೆಂಗಳೂರು :
ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ನಿಯಂತ್ರಣಕ್ಕೆ ಬಂದಿರುವ ಹಿನ್ನೆಲೆಯಲ್ಲಿ ನಾಳೆ ಬೆಳಗ್ಗೆ 6 ಗಂಟೆಯಿಂದ ಕೆಎಸ್‌ಆರ್ ಟಿಸಿ ಬಸ್ ಸಂಚಾರ ಆರಂಭವಾಗಲಿದ್ದು, ಡಿಪೋಗಳಲ್ಲಿ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ರಾಜ್ಯದ ಹಲವು ಕೆಎಸ್‌ಆರ‍್ ಟಿಸಿ ಬಸ್ ಡಿಪೋಗಳಲ್ಲಿ ಬಸ್ ಗಳನ್ನು ಪಿಪಿಇ ಕಿಟ್ ಧರಿಸಿ ತೊಳೆದು ಸ್ವಚ್ಚಗೊಳಿಸಲಾಗಿದ್ದು, ಬಸ್ ಒಳಗೆ ಸ್ಯಾನಿಟೈಸ್ ಮಾಡಲಾಗುತ್ತಿದೆ.
ಬಸ್ ಗಳಲ್ಲಿ ಶೇ. 50 ರಷ್ಟು ಪ್ರಯಾಣಿಕರಿಗೆ ಅವಕಾಶ ನೀಡಲಾಗಿದ್ದು, ಚಾಲಕರು ಮತ್ತು ನಿರ್ವಾಹಕರು ಕಡ್ಡಾಯವಾಗಿ ಕೋವಿಡ್ ಟೆಸ್ಟ್ ಮಾಡಿಸಿಕೊಂಡು ನೆಗೆಟಿವ್ ರಿಪೋರ್ಟ್ ತರಬೇಕು. ಜೊತೆಗೆ ಕೊರೊನಾ ಲಸಿಕೆ ಮೊದಲ ಅಥವಾ ಎರಡನೇ ಡೋಸ್ ಪಡೆದಿರಬೇಕು. ಮಾಸ್ಕ್, ದೈಹಿಕ ಅಂತರ ಕಡ್ಡಾಯವಾಗಿದೆ ಎಂದು ಸಾರಿಗೆ ಸೂಚನೆ ನೀಡಿದೆ.
ರಾಜ್ಯದ ಹಲವು ಜಿಲ್ಲೆಗಳಲ್ಲಿ ನಾಳೆಯಿಂದ ಅನ್ ಲಾಕ್ 2.0 ಜಾರಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೆಎಸ್ ಆರ್ ಟಿ, ಬಿಎಂಟಿಸಿ ಮತ್ತು ಮೆಟ್ರೋ ಸಂಚಾರಕ್ಕೆ ಅವಕಾಶ ನೀಡಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ