ಬೈಕ್‌ಗೆ ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿ, ಎಸ್‌ಐ ಸಾವು

ಬೆಂಗಳೂರು:

    ಬೆಂಗಳೂರಿನಲ್ಲಿ ಒಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಬೈಕ್‌ಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾದ ಪರಿಣಾಮ ಬೈಕ್‌ನಲ್ಲಿದ್ದ ಸಬ್ ಇನ್ಸ್ ಪೆಕ್ಟರ್ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಂಗಳೂರು-ಕನಕಪುರ ಮುಖ್ಯರಸ್ತೆಯ ಕಗ್ಗಲೀಪುರ ಪೊಲೀಸ್ ಠಾಣೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಕೆ.ಎಸ್.ಆರ್.ಟಿ.ಸಿ ಬಸ್ ಎರಡು ಬೈಕ್‌ಗಳಿಗೆ ಡಿಕ್ಕಿ ಹೊಡೆದು ರಸ್ತೆ ಬದಿ ಪಲ್ಟಿಯಾಗಿದೆ. ಬೈಕ್‌ನಲ್ಲಿದ್ದ ಸಬ್ ಇನ್ಸ್ ಪೆಕ್ಟರ್ ನಾಗರಾಜು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

    ಅಪಘಾತದಲ್ಲಿ ಬಸ್ ನಲ್ಲಿದ್ದ ಪ್ರಯಾಣಿಕರಿಗೆ ಸಣ್ಣ-ಪುಟ್ಟ ಗಾಯಗಳಾಗಿವೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕಗ್ಗಲೀಪುರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Recent Articles

spot_img

Related Stories

Share via
Copy link