ತುಮಕೂರು
ದೇವಸ್ಥಾನಕ್ಕೆಂದು ಬಸ್ ತೆರಳಲು ಬಸ್ಸಿಗಾಗಿ ಕಾಯುತ್ತಿದ್ದ ಇಬ್ಬರು ಮಹಿಳೆಯರಿಗೆ ಬಸ್ ಗುದ್ದಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರಿನ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ನಡೆದಿದೆ
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆ ಶೆಟ್ಟಿಹಳ್ಳಿ ಗ್ರಾಮದ ಆರು ಮಹಿಳೆಯರು ತುಮಕೂರಿನ ಗೊರವನಹಳ್ಳಿ ದೇವಸ್ಥಾನಕ್ಕೆ ಆಗಮಿಸಿದ್ದು ತುಮಕೂರಿನ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಗೊರವನಹಳ್ಳಿಗೆ ತೆರಳಲು ಬಸ್ಸಿಗಾಗಿ ಕಾಯುತ್ತಿದ್ದ ಮಹಿಳೆಯರು.
ಬಸ್ ನಿಲ್ದಾಣಕ್ಕೆ ಬಂದ ಕೂಡಲೇ ಬಸ್ ಹತ್ತಲು ಮುಂದಾದಾಗ ಬಸ್ ಏಕಾಏಕಿ ಹಿಂಬದಿ ಚಲಿಸಿದ್ದು ಎರಡು ಬಸ್ಗಳ ನಡುವೆ ಸಿಲುಕಿದ ಇಬ್ಬರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ಘಟನೆಯಲ್ಲಿ ಮೃತಪಟ್ಟ ಮಹಿಳೆಯರನ್ನ ಶ್ರೀರಂಗಪಟ್ಟಣ ತಾಲೂಕಿನ ಕೆ ಶೆಟ್ಟಿಹಳ್ಳಿ ಗ್ರಾಮದ ಪುಟ್ಟತಾಯಮ್ಮ ಹಾಗೂ ಪಂಕಜ ಎಂಬುವವರೇ ಮೃತಪಟ್ಟ ದುರ್ದೈವಿಗಳು, ಇನ್ನು ಅವರ ಜೊತೆಯಲ್ಲಿದ್ದ ನಾಲ್ವರು ಮಹಿಳೆಯರಾದ ರೇಣುಕಾ ಅನುಸೂಯ ಪುಷ್ಪ ಹಾಗೂ ಮಂಜಮ್ಮ ಎಂಬುವವರು ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ
ಇದು ಘಟನೆ ನಡೆದ ಕೂಡಲೇ ಕೆಎಸ್ಆರ್ಟಿಸಿ ಬಸ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದು ಮೃತಪಟ್ಟ ಮಹಿಳೆಯರ ಶವಗಳನ್ನು ತುಮಕೂರಿನ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ ಇನ್ನು ಸ್ಥಳದಲ್ಲೇ ಕುಟುಂಬಸ್ಥರ ಆಕ್ರಂದನ ಇನ್ನು ಮೃತಪಟ್ಟ ಮಹಿಳೆಯರ ಕುಟುಂಬಸ್ಥರು ಹಾಗೂ ಸ್ನೇಹಿತರ ಆಕ್ರಂದನ ಮುಗಿಲು ಮುಟ್ಟಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ