
ಚಾಲಕನ ನಿಯಂತ್ರಣ ತಪ್ಪಿ ಕೆ ಎಸ್ ಆರ್ ಟಿ ಸಿ ಬಸ್ ( KSRTC Bus ) ಸೇತುವೆಗೆ ಡಿಕ್ಕಿಯಾದ ಪರಿಣಾಮ, ಪ್ರಯಾಣಿಕರಿಬ್ಬರು ಗಾಯಗೊಂಡಿರೋ ಘಟನೆ ದಾವಣಗೆರೆಯ ನ್ಯಾಮತಿ ಬಳಿ ನಡೆದಿದೆ.
ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಗೋವಿನಕೋವಿ ಬಳಿಯಲ್ಲಿ ಮೈಸೂರಿನಿಂದ ಹೊನ್ನಾಳ್ಳಿಗೆ ತೆರಳುತ್ತಿದ್ದಂತ ಕೆ ಎಸ್ ಆರ್ ಟಿ ಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಸೇತುವೆಗೆ ಡಿಕ್ಕಿ ಹೊಡೆದಿದೆ.
ಇದರಿಂದಾಗಿ ಬಸ್ ನಲ್ಲಿದ್ದಂತ ಇಬ್ಬರು ಪ್ರಯಾಣಿಕರು ಗಾಯಗೊಂಡಿರೋದಾಗಿ ತಿಳಿದು ಬಂದಿದೆ.
