ಬೆಂಗಳೂರು :
ಅನ್ ಲಾಕ್ ನಂತ್ರ ಸಾರಿಗೆ ಬಸ್ ಟಿಕೆಟ್ ದರ ಹೆಚ್ಚಳವಾಗಲಿ ಎನ್ನುವ ಮಾತಿಗೆ ಬಿಲ್ ಖುಲ್ ಇಲ್ಲ ಎನ್ನುವ ಮೂಲಕ, ಡಿಸಿಎಂ ಲಕ್ಷ್ಮಣ್ ಸವದಿ ಸಾರಿಗೆ ಪ್ರಯಾಣಿಕರಿಗೆ ಗುಡ್ ನ್ಯೂಸ್ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದಂತ ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ್ ಸವದಿ, ಈಗಾಗಲೇ ಕೊರೋನಾ ಲಾಕ್ ಡೌನ್ ತಂದ ಸಂಕಷ್ಟದಿಂದಾಗಿ ಜನಸಾಮಾನ್ಯರು ಆರ್ಥಿಕ ಸಂಕಷ್ಟ ಅನುಭವಿಸುತ್ತಿದ್ದಾರೆ. ಇದೇ ಸಂದರ್ಭದಲ್ಲಿ ಸಾರಿಗೆ ಬಸ್ ಪ್ರಯಾಣದ ಟಿಕೆಟ್ ದರ ಹೆಚ್ಚಳ ಮಾಡಿದ್ರೇ ಮತ್ತಷ್ಟು ಹೊರೆಯನ್ನು ಅವರ ಮೇಲೆ ಹೊರಿಸಿದಂತೆ ಆಗಲಿದೆ. ಡೀಸೆಲ್ ಬೆಲೆಯಲ್ಲಿ ಏರಿಕೆಯಾದ್ರೂ ಸದ್ಯದ ಮಟ್ಟಿಗೆ ದರದಲ್ಲಿ ಯಾವುದೇ ಬದಲಾವಣೆ ಮಾಡೋದಿಲ್ಲ ಎಂಬುದಾಗಿ ತಿಳಿಸಿದ್ದಾರೆ.
ಕೊರೋನಾ ಲಾಕ್ ಡೌನ್ ತಂದ ಆರ್ಥಿಕ ಸಂಕಷ್ಟದಿಂದಾಗಿ ಸಾರಿಗೆ ನಿಗಮಗಳು ನಷ್ಟ ಅನುಭವಿಸುತ್ತಿವೆ. ಡೀಸೆಲ್ ಬೆಲೆ ಕೂಡ ಏರಿಕೆಯಾಗುತ್ತಲೇ ಇದೆ. ಹೀಗಾಗಿ ಸಾರಿಗೆ ಬಸ್ ಪ್ರಯಾಣ ದರ ಏರಿಕೆ ಬಗ್ಗೆ ನಿಗಮಗಳು ಸಲ್ಲಿಸಿದ್ದಂತ ಪ್ರಸ್ತಾವನೆಯನ್ನು ಸರ್ಕಾರ ಈಗಾಗಲೇ ನಿರಾಕರಿಸಿತ್ತು.
ಇದರ ಬೆನ್ನಲ್ಲೇ ಸಾರಿಗೆ ಸಚಿವರು ಸದ್ಯಕ್ಕೆ ಸಾರಿಗೆ ಬಸ್ ಟಿಕೆಟ್ ದರದಲ್ಲಿ ಯಾವುದೇ ಬದಲಾವಣೆ ಇಲ್ಲ ಎನ್ನುವ ಮೂಲಕ, ಸಾರಿಗೆ ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್ ನೀಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ