ಕ್ರಿಸ್‌ ಮಸ್‌ ಗೆ KSRTCಯಿಂದ ಭರ್ಜರಿ ಗಿಫ್ಟ್…..!

ಬೆಂಗಳೂರು:

     ಹಬ್ಬದ ಸಂದರ್ಭಗಳ  ಸಾಲು ರಜೆ ಹಿನ್ನೆಲೆಯಲ್ಲಿ ಊರುಗಳಿಗೆ, ಹೊರ ಪ್ರದೇಶಗಳಿಗೆ ಪ್ರವಾಸಕ್ಕೆ ಹೋಗುವ ಪ್ರಯಾಣಿಕರ ಸಂಖ್ಯೆ ಹೆಚ್ಚಿರುವುದರಿಂದ ಪ್ರಯಾಣಿಕರ ಅನುಕೂಲಕ್ಕಾಗಿ ಕೆಎಸ್‌ಆರ್‌ಟಿಸಿ 1,000 ವಿಶೇಷ ಬಸ್‌ಗಳನ್ನು ಬೆಂಗಳೂರಿನಿಂದ ರಾಜ್ಯದ ವಿವಿಧ ಕಡೆ ಓಡಿಸಲಿದೆ. ಅಲ್ಲದೆ, ರಾಜ್ಯದ ಪ್ರಮುಖ ಸ್ಥಳಗಳ ನಡುವೆಯೂ ಸಂಚರಿಸಲಿವೆ ಎಂದು ಕೆಎಸ್‌ಆರ್‌ಟಿಸಿ ತಿಳಿಸಿದೆ.

    ಡಿಸೆಂಬರ್‌ 22 , 23 ಹಾಗೂ 24 ಬೆಂಗಳೂರಿನಿಂದ ವಿಶೇಷ ಬಸ್‌ಗಳು ಸಂಚಾರ ನಡೆಸಲಿವೆ. ಸದ್ಯ ಲಭ್ಯವಿರುವ ಬಸ್‌ಗಳ ಓಡಾಟದ ಜೊತೆಗೆ ಹೆಚ್ಚುವರಿಯಾಗಿ 1,000 ವಿಶೇಷ ಬಸ್‌ಗಳು ಓಡಲಿದೆ.

    ಕ್ರಿಸ್‌ಮಸ್‌ ರಜೆ ಮುಗಿದ ಬಳಿಕ ಬೇರೆ ಬೇರೆ ಸ್ಥಳಗಳಿಂದ ಮತ್ತೆ ಬೆಂಗಳೂರಿಗೆ ವಾಪಸ್‌ ಆಗುವವರಿಗೆ ಡಿಸೆಂಬರ್‌ 25 ರಂದು ವಿವಿಧ ರಾಜ್ಯದ ವಿವಿಧ ಸ್ಥಳಗಳಿಂದ ಹಾಗೂ ಹೊರ ರಾಜ್ಯಗಳಿಂದ ವಿಶೇಷ ಬಸ್‌ಗಳ ವ್ಯವಸ್ಥೆಯನ್ನು ಮಾಡಲಾಗಿದೆ. ಅಲ್ಲದೆ, ಎಲ್ಲಾ ತಾಲೂಕು ಹಾಗೂ ಜಿಲ್ಲಾ ಬಸ್ ನಿಲ್ದಾಣಗಳಿಂದ ಸಂಚಾರ ಒತ್ತಡಕ್ಕನುಗುಣವಾಗಿ ವಿಶೇಷ ಸಾರಿಗೆಗಳನ್ನು ಕಾರ್ಯಾಚರಣೆ ಮಾಡಲಾಗುತ್ತದೆ.

ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದ ಕಡೆ ಹೊರಡಲಿದೆ.ತಮಿಳುನಾಡು ಮತ್ತು ಕೇರಳ ಕಡೆಗೆ ಅಂದರೆ ಮಧುರೈ, ಕುಂಭಕೋಣ, ಚೆನ್ನೆ, ಕೊಯಮತ್ತೂರ್, ತಿರುಚಿ, ಪಾಲಕ್ಕಾಡ್, ತ್ರಿಶೂರ್, ಏರ್ನಾಕುಲಂ, ಕೋಯಿಕೋಡ್, ಕ್ಯಾಲಿಕಟ್ ಮುಂತಾದ ಸ್ಥಳಗಳಿಗೆ ಹೋಗುವ ಪ್ರತಿಷ್ಠಿತ ಸಾರಿಗೆಗಳನ್ನು ಶಾಂತಿನಗರ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬಸ್ ನಿಲ್ದಾಣದಿಂದ ಹೊರಡಲಿದೆ.
    ಹೆಚ್ಚುವರಿ ಸಾರಿಗೆಗಳಿಗೆ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಸೌಲಭ್ಯ ಕಲ್ಪಿಸಲಾಗಿದ್ದು, ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೆಟು ಕಾಯ್ದಿರಿಸಿದಲ್ಲಿ ಶೇಕಡ 5 ರಷ್ಟು ರಿಯಾಯಿತಿ ನೀಡಲಾಗುತ್ತದೆ ಹಾಗೂ ಹೋಗುವ ಹಾಗೂ ಬರುವ ಪ್ರಯಾಣದ ಟಿಕೆಟ್‌ ನ್ನು ಒಟ್ಟಿಗೆ ಕಾಯ್ದಿರಿಸಿದರೆ ಬರುವ ಪ್ರಯಾಣ ದರದಲ್ಲಿ ಶೇಕಡ 10 ರಷ್ಟು ರಿಯಾಯಿತಿ ನೀಡಲಾಗುತ್ತದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap