ಕುಡಚಿ ಕಾಂಗ್ರೆಸ್ MLA​ ಪುತ್ರನಿಗೆ ಡಿಕೆ ಶಿವಕುಮಾರ್ ಹೆಸರು ನಾಮಕರಣ……!

ಬೆಂಗಳೂರು:

    ಕುಡಚಿ ಕಾಂಗ್ರೆಸ್ ಶಾಸಕ ಮಹೇಂದ್ರ ತಮ್ಮಣ್ಣನವರ್ ತಮ್ಮ ಮಗನಿಗೆ ಡಿಸಿಎಂ ಡಿಕೆ ಶಿವಕುಮಾರ್ ಅವರ ಹೆಸರನ್ನಿಟ್ಟಿದ್ದಾರೆ.ಡಿಕೆ ಶಿವಕುಮಾರ್ ಅವರೇ ಹೆಸರು ನಾಮಕರಣ ಮಾಡಿರುವುದು ವಿಶೇಷವಾಗಿದೆ. ಡಿಕೆ ಶಿವಕುಮಾರ್ ಅವರ ಗೃಹ ಕಚೇರಿಯಲ್ಲಿ ನಾಮಕರಣ ಕಾರ್ಯಕ್ರಮ ನಡೆದಿದೆ. ಡಿಕೆ ಶಿವಕುಮಾರ್ ಮಗುವಿಗೆ ತನ್ನ ಹೆಸರಿಟ್ಟ ಶುಭ ಹಾರೈಸಿದ್ದಾರೆ.

    ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಈ ಮಾಹಿತಿ ಹಂಚಿಕೊಂಡಿರುವ ಡಿಕೆ ಶಿವಕುಮಾರ್, ಇದು ಭಾಗ್ಯ, ಇದು ಭಾಗ್ಯ, ಇದು ಭಾಗ್ಯವಯ್ಯ! ನನ್ನ ಗೃಹಕಚೇರಿಯಲ್ಲಿಂದು ಕುಡಚಿ ಶಾಸಕರಾದ ಮಹೇಂದ್ರ ತಮ್ಮಣ್ಣನವರ್ ಅವರ ಮಗನಿಗೆ “ಶಿವಕುಮಾರ್” ಎಂದು ನಾಮಕರಣ ಮಾಡುವ ಭಾಗ್ಯ ನನ್ನದಾಯಿತು. ನನ್ನ ಹೆಸರನ್ನು ಮಗುವಿಗೆ ಇಡಲು ನಿರ್ಧರಿಸಿದ ಶಾಸಕರ ಈ ನಡೆಗೆ ನಾನು ಧನ್ಯ! ಎಂದಿದ್ದಾರೆ.

   ಮುಂದಿನ ದಿನಗಳಲ್ಲಿ ಈ ಮುದ್ದಾದ ಮಗು ನನಗಿಂತಲೂ ಎತ್ತರಕ್ಕೆ ಬೆಳೆಯಲಿ, ತಂದೆ-ತಾಯಿಗಳಿಗೆ ಒಳ್ಳೆಯ ಹೆಸರು ತರುವಂತಾಗಲಿ ಎಂದು ಶುಭಹಾರೈಸಿದೆ. ಕನ್ನಡ ರಾಜ್ಯೋತ್ಸವದ ಶುಭ ಸಂದರ್ಭದಲ್ಲಿ, ಈ ಶಿವಕುಮಾರ” ಕರುನಾಡ ಬೆಳಗುವ ಕುವರನಾಗಲಿ ಎಂದು ಮನತುಂಬಿ ಹಾರೈಸುವೆ ಎಂದು ಬರೆದುಕೊಂಡಿದ್ದಾರೆ.

Recent Articles

spot_img

Related Stories

Share via
Copy link