ಕುಕ್ಕೆ ಸುಬ್ರಹ್ಮಣ್ಯ ಆದಾಯದಲ್ಲಿ ಭಾರಿ ಏರಿಕೆ…!

ಮಂಗಳೂರು

     ಕರ್ನಾಟಕದ ಇತಿಹಾಸ ಪ್ರಸಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲ್ಲೂಕಿನ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆದಾಯದಲ್ಲಿ ಭಾರೀ ಹೆಚ್ಚಳವಾಗಿದೆ. 2024-25ನೇ ಸಾಲಿನ ವಾರ್ಷಿಕ ಆದಾಯ 155.95 ಕೋಟಿ ರೂ. ಏರಿಕೆ ಆಗಿದೆ. ಕಳೆದ ವರ್ಷ ವಾರ್ಷಿಕ ಆದಾಯ (income) 146.01 ಕೋಟಿ ರೂ. ಆಗಿತ್ತು. ಅಂದರೆ ಕಳೆದ ವರ್ಷಕ್ಕಿಂತ ಈ ಬಾರಿ 9.94 ಕೋಟಿ ರೂ. ಆದಾಯ ಏರಿಕೆ ಆಗಿದೆ. ಆ ಮೂಲಕ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಮತ್ತೆ ರಾಜ್ಯದ ಶ್ರೀಮಂತ ದೇವಸ್ಥಾನ ಎಂಬ ಹೆಗ್ಗಳಿಕೆ ಪಡೆದುಕೊಂಡಿದೆ.

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಹಿಂದೂ ಧಾರ್ಮಿಕ ಸಂಸ್ಥೆಗಳು ಹಾಗೂ ಧರ್ಮದಾಯ ದತ್ತಿ ಇಲಾಖೆಯಡಿ ಬರುತ್ತದೆ. ಇನ್ನು ಕುಕ್ಕೆ ಶ್ರೀ ಸುಬ್ರಹ್ಮಣ್ಯ ನಾಗಾರಾಧನೆಯ ಪ್ರಮುಖ ಕ್ಷೇತ್ರವಾಗಿದ್ದು, ಕರ್ನಾಟಕ ಸೇರಿದಂತೆ ಹೊರ ರಾಜ್ಯಗಳಿಂದಲೂ ನಿತ್ಯ ಸಾವಿರಾರು ಭಕ್ತರು ಆಗಮಿಸುತ್ತಾರೆ. ಸರ್ಪ ಸಂಸ್ಕಾರ ಸೇರಿದಂತೆ ವಿವಿಧ ಸೇವೆ ಹಾಗೂ ಇತರ ಮೂಲಗಳಿಂದ ಒಟ್ಟು 155.95 ಕೋಟಿ ರೂ ಆದಾಯವಾಗಿದೆ. ದೇವಸ್ಥಾನದ ಒಟ್ಟು ಖರ್ಚು 79.82 ಕೋಟಿ ರೂ. 

ಅತೀ ಹೆಚ್ಚು ಆದಾಯ ಗಳಿಸುವ ದೇವಾಲಯಗಳ ಪಟ್ಟಿಯಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಪ್ರಥಮ ಸ್ಥಾನದಲ್ಲಿದ್ದರೆ, ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ದೇವಸ್ಥಾನ ಎರಡನೇ ಸ್ಥಾನದಲ್ಲಿದೆ. ಈ ದೇವಸ್ಥಾನದ ಆದಾಯ 31 ಕೋಟಿ ರೂ. ಅದೇ ರೀತಿಯಾಗಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನವು 20 ಕೋಟಿ ರೂ.ಗಳ ಅಂದಾಜು ಆದಾಯದೊಂದಿಗೆ ಮೂರನೇ ಸ್ಥಾನದಲ್ಲಿದೆ.

Recent Articles

spot_img

Related Stories

Share via
Copy link