ಶಕ್ತಿ ಯೋಜನೆ ಮರುಪರಿಶೀಲನೆ : ಡಿಕೆಶಿ ಮಾತಿಗೆ ಕುಮಾರ ಸ್ವಾಮಿ ಕಿಡಿ

ಬೆಂಗಳೂರು

    ಕರ್ನಾಟಕ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆಯನ್ನು ಸ್ಥಗಿತಗೊಳಿಸುವ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಕೊಟ್ಟ ಸುಳಿವಿಗೆ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಡಿಕೆ ಶಿವಕುಮಾರ್ ಹೇಳಿ ಬಗ್ಗೆ ಬೆಂಗಳೂರನಲ್ಲಿ ‘ಟಿವಿ9’ಗೆ ಪ್ರತಿಕ್ರಿಯಿಸಿದ ಅವರು, ಅವರಿಗೆ (ಡಿಸಿಎಂಗೆ) ಕನಸಿನಲ್ಲಿ ಬಂದು ಮಹಿಳೆಯರು ಹೇಳಿದ್ದಾರೋ? ಅಥವಾ ದೇವರು ಬಂದು ಜ್ಞಾನೋದಯ ಮಾಡಿದ್ದಾನೆಯೇ? ಒಂದೊಂದೇ ಗ್ಯಾರಂಟಿ ಯೋಜನೆಗಳನ್ನು ಮರೆಯಾಗಿಸಲು ಇದೊಂದು ಕಾರಣ ಅಷ್ಟೆ ಎಂದಿದ್ದಾರೆ.

   ಟ್ವೀಟ್ ಮೂಲಕ ಮಹಿಳೆಯರು ತಿಳಿಸಿದ್ದಾರೆಂದು ಹೇಳುತ್ತಾರೆ. ಇವರಿಗೆ ಈಗ ಜ್ಞಾನೋದಯ ಆಗಿದೆಯಾ ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

   ಶಕ್ತಿ ಯೋಜನೆ ಮೂಲಕ ಅವರನ್ನು ಬಲಾಢ್ಯರನ್ನಾಗಿ ಮಾಡಿದ್ದೀರಾ? ಸರ್ಕಾರಕ್ಕೆ ಈ ಯೋಜನೆಯನ್ನು ದೀರ್ಘಾವಧಿಗೆ ಮಾಡಲು ಸಾಧ್ಯ ಆಗುತ್ತಿಲ್ಲ. ಒಂದೊಂದಾಗಿ ಗ್ಯಾರಂಟಿಗಳನ್ನು ರದ್ದುಗೊಳಿಸಲು ಮೊದಲ ಹಂತಂದ ಪ್ರಕ್ರಿಯೆ ಇದು. ಇದು ಗ್ಯಾರಂಟಿ ನಿಲ್ಲಿಸಲು ಒಂದು ಪೀಠಿಕೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

 
   ನಾನು ಗ್ಯಾರಂಟಿ ಕೊಡುವುದನ್ನು ವಿರೋಧಿಸುತ್ತಿಲ್ಲ. ಗ್ಯಾರಂಟಿ ಕೊಡಿ, ಆದರೆ ಗ್ಯಾರಂಟಿ ಹೆಸರಲ್ಲಿ ಆರ್ಥಿಕ ಪರಿಸ್ಥಿತಿ ಹಾಳು ಮಾಡಬೇಡಿ. ಮುಂದಿನ ಅಧಿಕಾರ ನಡೆಸುವ ಪೀಳಿಗೆ ಭವಿಷ್ಯ ಹಾಳು ಮಾಡಬೇಡಿ ಎಂದು ಅವರು ಹೇಳಿದ್ದಾರೆ. ಅನ್ನ ಭಾಗ್ಯ ಯೋಜನೆಗೂ ಷರತ್ತು, ಮಾರ್ಗಸೂಚಿ ಅಳವಡಿಸಿದ್ದಾರೆ. ಅಕ್ಕಿ ಕೊಡುವುದನ್ನು ಕಡಿತಗೊಳಿಸಿದ್ದಾರೆ. ಇದು ಮುಂದೆ ಯಾವ ಹಂತಕ್ಕೆ ಹೋಗುತ್ತದೆ ಎಂದು ಕಾದು ನೋಡಿ. ನಮಗೆ ಗ್ಯಾರಂಟಿ ಬಗ್ಗೆ ಯಾವುದೇ ಹೊಟ್ಟೆ ಉರಿ ಇಲ್ಲ. ಗ್ಯಾರಂಟಿ ಬೇಕಾದರೆ ಡಬಲ್ ಮಾಡಿಕೊಳ್ಳಿ, ಆದರೆ ರಾಜ್ಯವನ್ನು ದೀವಾಳಿ ಮಾಡಬೇಡಿ ಎಂದು ಕುಮಾರಸ್ವಾಮಿ ಹೇಳಿದ್ದಾರೆ.
   ಸರ್ಕಾರದ ಅಭಿವೃದ್ಧಿ ಶೂನ್ಯ ಆಗಿದೆ. ಜನರ ತೆರಿಗೆ ಹಣವನ್ನು ಗ್ಯಾರಂಟಿ ಹೆಸರಲ್ಲಿ ವ್ಯಯಿಸಿ ರಾಜ್ಯದ ಆರ್ಥಿಕ ಶಕ್ತಿ ಕುಂದಿಸುತ್ತಿದ್ದಾರೆ. ಬೇರೆ ದೇಶಗಳ ಅರಾಜಕತೆ ನಮ್ಮ ರಾಜ್ಯಕ್ಕೆ ಬರಬಾರದು ಎಂಬುದು ನಮ್ಮ ಕಳಕಳಿ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

Recent Articles

spot_img

Related Stories

Share via
Copy link
Powered by Social Snap